ಬೆಂ.ಗ್ರಾ.ಜಿಲ್ಲೆ: ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತಂದಿದ್ದು, ಎಪಿಎಲ್ ಮತ್ತು ಬಿಪಿಎಲ್ ಕುಟುಂಬದ ಮೊದಲ ಪ್ರಸವದ ಗರ್ಭಿಣಿ/ಬಾಣಂತಿ ಮಹಿಳೆಯರಿಗೆ ಸಾಕಷ್ಟು ವಿಶ್ರಾಂತಿಗಾಗಿ, ಅವರ ವೇತನ ನಷ್ಟಕ್ಕಾಗಿ ನೀಡುವ ಸೌಲಭ್ಯವಾಗಿದ್ದು, ರೂ. 5 ಸಾವಿರಗಳನ್ನು ಮೂರು ಕಂತುಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಫಲಾನುಭವಿಗಳು ಈ ಸೌಲಭ್ಯ ಪಡೆಯಬಹುದು.
ಅರ್ಜಿಯೊಂದಿಗೆ ಫಲಾನುಭವಿ ಹಾಗೂ ಅವರ ಪತಿಯ ಆಧಾರ್ ಕಾರ್ಡ್ ಪ್ರತಿ, ತಾಯಿ ಮತ್ತು ಮಗು ಕಾರ್ಡ್, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸುವುದು.
2017 ಜನವರಿ 01 ರಂದು ಯೋಜನೆ ಪ್ರಾರಂಭವಾದಂದಿನಿಂದ ಇದುವರೆಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 21265 ಫಲಾನುಭವಿಗಳು ಸೌಲಭ್ಯವನ್ನು ಪಡೆದಿದ್ದು, ರೂ. 7,43,59,000/-ಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..