ದೊಡ್ಡಬಳ್ಳಾಪುರ: ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ತಾಲೂಕಿನಲ್ಲಿ ಮುಸ್ಲಿಂ ಬಾಂಧವರಿಂದ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ಕೊವಿಡ್-19 ಮಾರ್ಗಸೂಚಿ ಹಿನ್ನಲೆಯಲ್ಲಿ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶವಿರಲಿಲ್ಲ. ಬಕ್ರೀದ್ ಅಂಗವಾಗಿ ಮಸೀದಿಗಳಲ್ಲಿ ಸೀಮಿತ ಜನರಿಂದ ವಿಶೇಷ ಪ್ರಾರ್ಥನೆ, ಧಾರ್ಮಿಕ ಸಂಪ್ರದಾಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಮುಸ್ಲಿಂ ಗುರುಗಳಿಂದ ದಾರ್ಮಿಕ ವಿಧಾನಗಳನ್ನು ನೆರವೇರಿಸಲಾಯಿತು.
ನಗರ ಹಾಗೂ ಗ್ರಾಮಾಂತರ ಪ್ರದೇಶದ ಮಸೀದಿಗಳಲ್ಲಿ ನಿಗದಿತ ಜನಸಂಖ್ಯೆಯಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆದವು.
ಬಕ್ರೀದ್ ಆಚರಣೆಯಲ್ಲಿ ತಮ್ಮ ಶಕ್ಯಾನುಸಾರ ಮುಸ್ಲಿಂ ಬಾಂಧವರು ದಾನ ಮಾಡಿ ಬಕ್ರೀದ್ ಆಚರಣೆ ಮಾಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..