Site icon ಹರಿತಲೇಖನಿ

ಜುಲೈ.27ರ ಒಳಗಾಗಿ ಗ್ರಾಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಚಾಲನೆ ನೀಡಿ: ಇಒ ಮುರುಡಯ್ಯ

Channel Gowda
Hukukudi trust

ಬೆಂಗಳೂರು: ಸ್ವಚ್ಛ ಭಾರತ್‌ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ಸ್ಥಳೀಯವಾಗಿಯೇ ವಿಲೇವಾರಿ ಮಾಡುವ ಸಲುವಾಗಿ ಗ್ರಾಪಂ ಮಟ್ಟದಲ್ಲೇ ಸ್ಥಾಪಿಸಲಾಗಿರುವ ಘನ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಘಟಕಗಳನ್ನು ಜುಲೈ 27ರ ಒಳಗಾಗಿ ಚಾಲನೆ ನೀಡಬೇಕೆಂದು ತಾಲೂಕು ಪಂಚಾಯಿತಿ ಇಒ ಮುರುಡಯ್ಯ ತಿಳಿಸಿದ್ದಾರೆ.

Aravind, BLN Swamy, Lingapura

ತಾಲೂಕಿನ ಹಲವು ಗ್ರಾಮಪಂಚಾಯತಿಗಳಲ್ಲಿ ಆರಂಭವಾಗದ ತ್ಯಾಜ್ಯ ಸಂಗ್ರಹ ಕಾರ್ಯದ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ತ್ಯಾಜ್ಯ ಬಹುದೊಡ್ಡ ಸವಾಲಾಗಿದೆ. ಹೀಗಾಗಿ, ಗ್ರಾಮ ಮಟ್ಟದಲ್ಲಿ ತ್ಯಾಜ್ಯ ವಿಲೇವಾರಿಗಾಗಿ ಕೇಂದ್ರ ಸರ್ಕಾರ ಯೋಜನೆ ರೂಪಿಸಿ ಪ್ರತಿ ಗ್ರಾಮ ಪಂಚಾಯಿತಿಗೆ 20 ಲಕ್ಷ ರೂ. ನೀಡಿದೆ. ಆ ಹಣದಲ್ಲಿ ಯೋಜನೆ ಅನುಷ್ಟಾನಗೊಳಿಸಲಾಗಿದೆ.

ಪ್ರಸ್ತುತ ತಾಲೂಕಿನ 15 ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಒಣ ಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಗುತ್ತಿದೆ. 3 ಗ್ರಾಮಪಂಚಾಯಿತಿಗಳ ಘಟಕ ಕೆಲವೆ ದಿನಗಳಲ್ಲಿ ಆರಂಭಗೊಳ್ಳಲಿವೆ. ಆದರೆ ಉಳಿದ 10 ಗ್ರಾಮಪಂಚಾಯಿತಿಗಳಲ್ಲಿ ಸರ್ಕಾರ ನೀಡಲಾದ ಅನುದಾನದಡಿಯಲ್ಲಿ ವಾಹನ, ಕಟ್ಟಡ, ಮತ್ತಿತರ ವಸ್ತುಗಳ ಖರೀದಿಸಿ ಈಗಾ ಸ್ಥಳೀಯ ಅನುದಾನದ ಕೊರತೆಯ ನೆಪವೊಡ್ಡಿ ಯೋಜನೆ ಆರಂಭಿಸದೆ ಉಳಿದ್ದಾರೆ.

Aravind, BLN Swamy, Lingapura

ಈಗಾಗಲೇ ಇಲಾಖೆ ಮಟ್ಟದಲ್ಲಿ ಇಂತಹ ಗ್ರಾಮಪಂಚಾಯಿತಿಗಳಲ್ಲಿ ಜುಲೈ 27ರ ಒಳಗೆ ಕಾರ್ಯಾ ಆರಂಭಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮುರುಡಯ್ಯ ತಿಳಿಸಿದ್ದಾರೆ.

ನಗರ ಪ್ರದೇಶಗಳಂತೆಯೇ ಗ್ರಾಮಗಳಲ್ಲಿಯೂ ಶುಚಿತ್ವ ಕಾಪಾಡಲು,ಗ್ರಾಮಗಳನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಗುತ್ತಿದೆ.

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕ ಮಾದರಿಯಲ್ಲಿ ಸಮರ್ಪಕ ಘನತ್ಯಾಜ್ಯ ವಿಲೇವಾರಿ ಘಟಕಗಳ ಸ್ಥಾಪನೆಗೆ ಸರ್ಕಾರ ಮುಂದಾಗಿದ್ದು, ಕೇಂದ್ರ ಸರ್ಕಾರದಿಂದ ಪ್ರತಿ ಗ್ರಾಮ ಪಂಚಾಯಿತಿಗೆ 20 ಲಕ್ಷ ರೂ. ಮಂಜೂರಾಗಿದೆ.

ಬಿಸಾಡುವುದು ತಪ್ಪಬೇಕು: ಜನರು ಘನ ಮತ್ತು ದ್ರವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದರಿಂದ ಗ್ರಾಮಗಳಲ್ಲಿ ಉಂಟಾಗುತ್ತಿರುವ ಅನೈರ್ಮಲ್ಯದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎನ್ನುತ್ತಾರೆ ಇಒ ಮುರುಡಯ್ಯ.

ನಗರ, ಪಟ್ಟಣ ಪ್ರದೇಶದಂತೆಯೇ ಗ್ರಾಮಗಳ ಮನೆ ಮನೆಯಿಂದಲೇ ಕಸ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿಯೇ ವಾಹನಗಳ ಖರೀದಿ ಮಾಡಲಾಗಿದೆ.

ಪ್ರತಿ ಮನೆಯಲ್ಲಿ ಕಸ ಹಾಕುವ ಮೊದಲು ಹಸಿ, ಒಣ, ಮರು ಬಳಕೆಯಾಗುವ ಕಸ ಎಂದು ವಿಂಗಡಣೆ ಮಾಡುವಂತೆ ಆಯಾ ಗ್ರಾ.ಪಂ. ಅಧಿಕಾರಿಗಳು ಅರಿವು ಮೂಡಿಸಲಿದ್ದಾರೆ. ಗ್ರಾ.ಪಂ. ಸಿಬ್ಬಂದಿ ಕಸ ಸಾಗಣೆ ವಾಹನಗಳ ಮೂಲಕ ಮನೆಗಳ ಬಳಿಗೆ ಹೋಗಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಹಸಿಕಸವನ್ನು ಗೊಬ್ಬರವಾಗಿ ಬಳಸುವುದರಿಂದ ಒಣ ಕಸಕ್ಕೆ ಒತ್ತು ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

Exit mobile version