ಹಂಗೇರಿ: ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನ 73 ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್ ಈ ಸಾಧನೆ ಮಾಡಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೀರಾ ಬಾಯ್ ಚಾನು ಶನಿವಾರ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಇದಾದ ಮರುದಿನವೇ ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದು ಕೊಂಡಿದ್ದಾರೆ.
ಪ್ರಿಯಾ ಮಲಿಕ್ ಸಾಧನೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..