ದೊಡ್ಡಬಳ್ಳಾಪುರ: ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ / ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಜೆ.ಸಂದೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆಯಂತೆ ಗ್ರಾಮಪಂಚಾಯಿತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆಗಾಗಿ ಇಂದು ಸರ್ವ ಸದಸ್ಯರ ಸಭೆ ಕರೆಯಲಾಗಿತ್ತು.
ಚುನಾವಣೆ ಅಧಿಕಾರಿಯಾಗಿ ಅಕ್ಷರದಾಸೋಹ ಇಲಾಖೆಯ ದ್ರಾಕ್ಷಾಯಿಣಿ ನೇತೃತ್ವದಲ್ಲಿ ನಡೆದ ಚುನಾವಣೆ ಪ್ರಕ್ರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ) ಮೀಸಲಾತಿ ಅಡಿಯಲ್ಲಿ ಅವಿರೋಧ ಆಯ್ಕೆ ನಡೆದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..