ದೊಡ್ಡಬಳ್ಳಾಪುರ: ಕರ್ತವ್ಯ ಲೋಪದ ಆರೋಪದಡಿ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಪಂ ಪಿಡಿಒ ವಿರುದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾಪಂಚಾಯಿತಿ ಸಿಇಒ ಮತ್ತು ತಾಲೂಕು ಪಂಚಾಯಿತಿ ಇಒ ಅವರಿಗೆ ದೂರು ನೀಡಿರುವುದು ವರದಿಯಾಗಿದೆ.
ಹೆಗ್ಗಡಿಹಳ್ಳಿ ಗ್ರಾಮಪಂಚಾಯಿತಿ ಕಟ್ಟಡದ ಮೇಲೆ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಪ್ಲೆಕ್ಸ್ ಅಳವಡಿಸಲಾಗಿದೆ. ಆದರೆ, ಅನುಮತಿ ಪಡೆಯದೆ ಕಟ್ಟಡದ ಮೇಲೆ ಪ್ಲೆಕ್ಸ್ ಕಟ್ಟಿರುವವರ ವಿರುದ್ದ ಪಿಡಿಒ ಶಿವರಾಜ್ ಎನ್ನುವವರು ಕಾನೂನು ಕ್ರಮಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ್ದಾರೆನ್ನುವುದು ದೂರಿಗೆ ಕಾರಣವಾಗಿದೆ.
ಈ ಕುರಿತು ಪಿಡಿಒ ಶಿವರಾಜ್ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೊಡ್ಡಬಳ್ಳಾಪುರದ ನ್ಯಾಯವಾದಿ ಟಿ.ಕೆ.ಹನುಮಂತರಾಜು ಎನ್ನುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾಪಂಚಾಯಿತಿ ಸಿಇಒ ಮತ್ತು ತಾಲೂಕು ಪಂಚಾಯಿತಿ ಇಒ ಅವರಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..