ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020ನೇ ಸಾಲಿನ ಏಕಲವ್ಯ ಪ್ರಶಸ್ತಿ ಮತ್ತು ನಗದು ಪುರಸ್ಕಾರಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಏಕಲವ್ಯ ಪ್ರಶಸ್ತಿಗೆ ಕಳೆದ 5 ವರ್ಷಗಳಲ್ಲಿ ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ರೀಡಾಪಟುಗಳು ಹಾಗೂ 2020ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ, ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ, ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದ್ದು, ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದವರಿಗೆ, ಪದಕ ವಿಜೇತರಾದವರಿಗೆ ರೂ. 50,000/- ಗಳ ನಗದು ಪುರಸ್ಕಾರವನ್ನು ನೀಡಲಾಗುವುದು.
ಏಕಲವ್ಯ ಪ್ರಶಸ್ತಿ ಹಾಗೂ ನಗದು ಪುರಸ್ಕಾರ ಪಡೆಯಲು ಅರ್ಹ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ರೀಡಾಪಟುಗಳು ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಪಡೆದು, ತಮ್ಮ ಸಾಧನೆಗಳ ದಾಖಲೆಗಳೊಂದಿಗೆ 2021ರ ಆಗಸ್ಟ್ 27ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಗೀತಾ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……