ದೊಡ್ಡಬಳ್ಳಾಪುರ: ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಈ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಶ್ರಮವು ಶ್ಲಾಘನೀಯ ಎಂದು ಕನಸವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮೇಜರ್ ವಿಜೇತ ಹೇಳಿದರು.
ನಗರದ ಪೊಲೀಸ್ ಠಾಣೆ ಆವರಣದಲ್ಲಿನ ಪೊಲೀಸ್ ಉಪವಿಭಾಗದ ಸಭಾಂಗಣದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ ನಡೆದ ಆರೋಗ್ಯ ಕುರಿತಂತೆ ಕೈಗೊಳ್ಳಬೇಕಿರುವ ಎಚ್ಚರಿಕೆಗಳ ಬಗ್ಗೆ ತಿಳುವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವೈದ್ಯರಂತೆ ರಾತ್ರಿ ಹಗಲೆನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯುವಲ್ಲಿ ಕೆಲಸ ಮಾಡಿದರು. ಈಗ ಮತ್ತೆ ಕೋವಿಡ್ ಮೂರನೇ ಅಲೆಯ ಸೋಂಕು ಹರಡುವ ಅಪಾಯಗಳು ಎದುರಾಗುತ್ತಿವೆ. 2ನೇ ಅಲೆಯಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯು ಸಹ ಮೃತರಾಗಿದ್ದಾರೆ. ಮೂರನೇ ಅಲೆ ಎದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಇಡೀ ದಿನ ಮಾಸ್ಕ್ ಧರಿಸುವಾಗ ಉಸಿರಾಟಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೈಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಕಡೆಗೆ ಆದ್ಯತೆ ನೀಡಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದರು.
ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು, ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವುದು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೊಸ ಅನುಭವ. ಆದರೆ ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಪೊಲೀಸ್ ಇಲಾಖೆಗೆ ಇದೆ ಎಂದರು.
ಕುಟುಂಬದ ಎಲ್ಲರೂ ಮನೆಯಲ್ಲಿಯೇ ಇರುವಂತೆ ಮಾಡಿದ್ದ ಲಾಕ್‍ಡೌನ್ ಹಲವಾರು ಕೌಟಂಬಿಕ ಸಮಸ್ಯೆಗಳನ್ನು ಸೃಷ್ಠಿಸಿದೆ. ಮಕ್ಕಳು, ಮಹಿಳೆಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರುಗಳೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಗುರುತರವಾದ ಹೊಣೆಗಾರಿಕೆ ನಮ್ಮ ಇಲಾಖೆಯ ಮೇಲಿದೆ. ಇಲಾಖೆಯಲ್ಲಿನ ಕಾನೂನುಗಳನ್ನು ಜಾರಿಮಾಡುವಾಗ ನೊಂದವರ ಪರವಾಗಿ ನಿಲ್ಲಬೇಕು ಎಂದರು.
ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ಸಾರ್ವಜನಿಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಮುಖ್ಯವಾಗಿ ಸಂವಹನ ಕೌಶಲ್ಯ ಅಗತ್ಯ. ನಮ್ಮ ಮಾತಿನ ಕಲೆಯಿಂದ ಯಾವುದೇ ಕ್ಲಿಷ್ಟಕರವಾದ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದಾಗಿದೆ. ಜನ್ನ ಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಭಾಷಾ ಬಳಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಹಾಗೂ ಕರ್ತವ್ಯಗಳನ್ನು ನಮ್ಮ ಸಂವಿಧಾನ ನೀಡಿದೆ.ಇದನ್ನು ಸದಾ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಬ್ಬಂದಿಗಳು ತಮ್ಮ ಕುಟುಂಬದಲ್ಲಿನ ಒತ್ತಡವನ್ನು ಕೆಲಸದಲ್ಲಿ ತರದೇ ಕರ್ತವ್ಯ ನಿರ್ವಹಿಸುವುದನ್ನು ಅಭ್ಯಾಸಮಾಡಿಕೊಳ್ಳಬೇಕು. ಬೆಳಗಿನ ಸಮಯದಲ್ಲಿ ಯೋಗಾ, ಧ್ಯಾನ ಮಾಡುವುದು ಆರೋಗ್ಯದ ದೃಷ್ಠಿಯಿಂದಲು ಉತ್ತಮವಾಗಲಿದೆ ಎಂದರು.
ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..ರೊನಾ ಸೋಂಕು ತಡೆಯಲ್ಲಿ ಪೊಲೀಸ್ ಸಿಬ್ಬಂದಿಯ ಕರ್ತವ್ಯ ಶ್ಲಾಘನೀಯ: ಡಾ.ಮೇಜರ್ ವಿಜೇತ
ದೊಡ್ಡಬಳ್ಳಾಪುರ: ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಈ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಶ್ರಮವು ಶ್ಲಾಘನೀಯ ಎಂದು ಕನಸವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮೇಜರ್ ವಿಜೇತ ಹೇಳಿದರು.
ನಗರದ ಪೊಲೀಸ್ ಠಾಣೆ ಆವರಣದಲ್ಲಿನ ಪೊಲೀಸ್ ಉಪವಿಭಾಗದ ಸಭಾಂಗಣದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ ನಡೆದ ಆರೋಗ್ಯ ಕುರಿತಂತೆ ಕೈಗೊಳ್ಳಬೇಕಿರುವ ಎಚ್ಚರಿಕೆಗಳ ಬಗ್ಗೆ ತಿಳುವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವೈದ್ಯರಂತೆ ರಾತ್ರಿ ಹಗಲೆನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯುವಲ್ಲಿ ಕೆಲಸ ಮಾಡಿದರು. ಈಗ ಮತ್ತೆ ಕೋವಿಡ್ ಮೂರನೇ ಅಲೆಯ ಸೋಂಕು ಹರಡುವ ಅಪಾಯಗಳು ಎದುರಾಗುತ್ತಿವೆ. 2ನೇ ಅಲೆಯಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯು ಸಹ ಮೃತರಾಗಿದ್ದಾರೆ. ಮೂರನೇ ಅಲೆ ಎದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಇಡೀ ದಿನ ಮಾಸ್ಕ್ ಧರಿಸುವಾಗ ಉಸಿರಾಟಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೈಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಕಡೆಗೆ ಆದ್ಯತೆ ನೀಡಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದರು.
ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು, ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವುದು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೊಸ ಅನುಭವ. ಆದರೆ ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಪೊಲೀಸ್ ಇಲಾಖೆಗೆ ಇದೆ ಎಂದರು.
ಕುಟುಂಬದ ಎಲ್ಲರೂ ಮನೆಯಲ್ಲಿಯೇ ಇರುವಂತೆ ಮಾಡಿದ್ದ ಲಾಕ್‍ಡೌನ್ ಹಲವಾರು ಕೌಟಂಬಿಕ ಸಮಸ್ಯೆಗಳನ್ನು ಸೃಷ್ಠಿಸಿದೆ. ಮಕ್ಕಳು, ಮಹಿಳೆಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರುಗಳೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಗುರುತರವಾದ ಹೊಣೆಗಾರಿಕೆ ನಮ್ಮ ಇಲಾಖೆಯ ಮೇಲಿದೆ. ಇಲಾಖೆಯಲ್ಲಿನ ಕಾನೂನುಗಳನ್ನು ಜಾರಿಮಾಡುವಾಗ ನೊಂದವರ ಪರವಾಗಿ ನಿಲ್ಲಬೇಕು ಎಂದರು.
ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ಸಾರ್ವಜನಿಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಮುಖ್ಯವಾಗಿ ಸಂವಹನ ಕೌಶಲ್ಯ ಅಗತ್ಯ. ನಮ್ಮ ಮಾತಿನ ಕಲೆಯಿಂದ ಯಾವುದೇ ಕ್ಲಿಷ್ಟಕರವಾದ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದಾಗಿದೆ. ಜನ್ನ ಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಭಾಷಾ ಬಳಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಹಾಗೂ ಕರ್ತವ್ಯಗಳನ್ನು ನಮ್ಮ ಸಂವಿಧಾನ ನೀಡಿದೆ.ಇದನ್ನು ಸದಾ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಬ್ಬಂದಿಗಳು ತಮ್ಮ ಕುಟುಂಬದಲ್ಲಿನ ಒತ್ತಡವನ್ನು ಕೆಲಸದಲ್ಲಿ ತರದೇ ಕರ್ತವ್ಯ ನಿರ್ವಹಿಸುವುದನ್ನು ಅಭ್ಯಾಸಮಾಡಿಕೊಳ್ಳಬೇಕು. ಬೆಳಗಿನ ಸಮಯದಲ್ಲಿ ಯೋಗಾ, ಧ್ಯಾನ ಮಾಡುವುದು ಆರೋಗ್ಯದ ದೃಷ್ಠಿಯಿಂದಲು ಉತ್ತಮವಾಗಲಿದೆ ಎಂದರು.
ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..