ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜು ಮತ್ತು ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2021-22ನೇ ಸಾಲಿನಲ್ಲಿ ಪ್ರತಿ ವಸತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯ ಪಿಸಿಎಂಬಿ(PCMB) ಮತ್ತು ಪಿಸಿಎಂಸಿ(PCMC) ಸಂಯೋಜನೆಗಳಿಗೆ ಒಟ್ಟು 80 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು.
ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಸ್ಟೇಷನರಿ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತ ಸಿ.ಇ.ಟಿ ಮತ್ತು ನೀಟ್ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವುದರ ಜೊತೆಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.
ಆಸಕ್ತರು ಉಪ ನಿರ್ದೇಶಕರ ಕಚೇರಿ, ನಂ. 217, 2ನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ, ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿಸಿದ ವಸತಿಶಾಲೆ/ ಕಾಲೇಜುಗಳಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ 2021ರ ಆಗಸ್ಟ್ 23ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-29787447, ಮೊ.ಸಂ.: 8971259724, 7259613001, 9739567241 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..