ದೊಡ್ಡಬಳ್ಳಾಪುರ: ಜಾಗತಿಕ ತಾಪಮಾನ, ಪರಿಸರ ಮಾಲಿನ್ಯದಿಂದಾಗಿ ಜೀವ ಸಂಕುಲ ಅಪಾಯದಲ್ಲಿದ್ದು, ಜೀವ ವೈವಿಧ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಜಿಲ್ಲಾಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ನಗರದ ವಿನಾಯಕ ನಗರದ ಉದ್ಯಾನವನದಲ್ಲಿ ನಗರಸಭೆ ವತಿಯಿಂದ ಜೀವ ವೈವಿಧ್ಯ ಮಾಸಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಸರ ಎಂದರೆ ಬರೀ ಗಿಡಮರಗಳಷ್ಟೇ ಅಲ್ಲ. ಇದಕ್ಕೆ ಪೂರಕವಾಗಿರುವ ಹಲವಾರು ಜೀವ ವೈವಿಧ್ಯಗಳಿವೆ. ಪ್ರಾಕೃತಿಕ ಸಮೋತಲನಕ್ಕೆ ಜೀವ ವೈವಿಧ್ಯ ಮಹತ್ತರ ಪಾತ್ರ ವಹಿಸಲಿದೆ. ಗಿಡ ಮರಗಳನ್ನು ಬೆಳೆಸುವುದರಿಂದ ಪಕ್ಷಿಗಳು, ಕೀಟಗಳು ಸೇರಿ, ಹಲವರು ಬಗೆಯ ಜೀವ ಸಂಕುಲಗಳು ಪ್ರಕೃತಿಯಲ್ಲಿ ತಮ್ಮದೇ ಆದ ಪಾತ್ರ ನಿರ್ವಹಿಸಲು ದಾರಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪವಿಭಾಗಾಕಾರಿ ಅರುಳ್ ಕುಮಾರ್, ತಹಸೀಲ್ದಾರ್ ಟಿ.ಎಸ್.ಶಿವರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಬಿ.ಎಸ್.ಸುಮಾ, ನಗರಸಭೆ ಪೌರಾಯುಕ್ತ ರಮೇಶ್ ಎಸ್,ಸುಣಗಾರ್, ಪರಿಸರ ಅಕಾರಿ ಈರಣ್ಣ, ಯುವ ಸಂಚಲನದ ಅಧ್ಯಕ್ಷ ಚಿದಾನಂದ, ರೈತ ಮುಖಂಡರಾದ ಸುಲೋಚನಮ್ಮ ವೆಂಕಟರೆಡ್ಡಿ ಮತ್ತಿತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..