ದೊಡ್ಡಬಳ್ಳಾಪುರ: ನೆಪಮಾತ್ರಕ್ಕೆ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಿದ್ದು, ಕಾಮಗಾರಿ ಮಾತ್ರ ಪೂರ್ಣಗೊಳ್ಳದ ಕಾರಣ ಅತಂತ್ರ ಸ್ಥಿತಿಗೆ ಸಿಲುಕಿರುವ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಕಳೆದ 6 ತಿಂಗಳ ಹಿಂದೆ ಮನೆ ಮನೆಗೂ ಕೊಳಾಯಿ ಮೂಲಕ ಮುಖಾಂತರ ನೀರು ಸರಬರಾಜು ಮಾಡಲು ಜಿಲ್ಲಾಪಂಚಾಯಿತಿ ಸದಸ್ಯ ಹೆಚ್.ಅಪ್ಪಯ್ಯಣ್ಣ ಗುದ್ದಲಿ ಪೂಜೆ ನೆರವೇರಿಸಿದ್ದರು, ಆದರೆ ಕಾಮಗಾರಿ ಕಾರ್ಯರೂಪಕ್ಕೆ ಬರದೆ ನೆನೆಗುದಿಗೆ ಬಿದ್ದಿರುವುದು ಸಮಸ್ಯೆಗೆ ಕಾರಣವಾಗಿದೆ.
ಈ ಗ್ರಾಮದಲ್ಲಿ ಸುಮಾರು 160 ಕ್ಕು ಹೆಚ್ಚು ಕುಟುಂಬಗಳು ವಾಸವಾಗಿದ್ದು, ಸಾಕಷ್ಟು ಕುಟುಂಬಗಳು ಕೂಲಿ ಕೆಲಸದ ಮೇಲೆ ಅವಲಂಬಿತರಾಗಿದ್ದಾರೆ. ಬೆಳಿಗ್ಗೆ ಆದರೆ ಸಾಕು ಕೂಲಿ ಕೆಲಸವನ್ನು ಅವಲಂಬಿಸಿಕೊಂಡು ತಮ್ಮ ಕೆಲಸದಲ್ಲಿ ತೊಡಿಗಿಸಿಕೊಂಡಿದ್ದು, ಮೂರು ದಿನಗಳಿಗೊಮ್ಮೆ ಸಿಸ್ಟನ್ ಗಳಿಗೆ ಬಿಡುವ ನೀರಿಗಾಗಿ ಕೂಲಿ ಕೆಲಸ ತ್ಯಜಿಸಿ ನೀರನ್ನು ತುಂಬಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ಗ್ರಾಮದ ಜನತೆ ನೀರಿಗಾಗಿ ಹಲವು ದಿನಗಳಿಂದ ಪರದಾಡುತ್ತಿದ್ದರೂ ಜನಪ್ರತಿನಿದಿಗಳಾಗಲಿ, ಅಧಿಕಾರಿಗಳಾಗಲಿ ಗಮನ ಹರಿಸುತ್ತಿಲ್ಲ ಎಂಬ ಆರೋಪ ಗ್ರಾಮಸ್ಥರದ್ದು.
ಇನ್ನಾದರು ಗ್ರಾಮಪಂಚಾಯತಿ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ, ನೀರು ಪೂರೈಕೆಗೆ ಕ್ರಮಕೈಗೊಳ್ಳುವರೆ ಕಾದು ನೋಡ ಬೇಕಿದೆ..
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..