ಉಡುಪಿ: ರಾಜ್ಯದಲ್ಲಿ ಕರೊನಾ ಸೋಂಕಿನ ಪಾಸಿಟಿವಿಟಿ ರೇಟ್ ಹೆಚ್ಚುತ್ತಿದ್ದು, ಚಿಕ್ಕ ಮಕ್ಕಳಲ್ಲಿ ಕೂಡ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಸೋಂಕು ನಿಯಂತ್ರಣಕ್ಕೆ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿರುವ ಅವರು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..