ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಇಂದು ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿನ ವಿವಿಧ ಅಂಗಡಿಗಳು, ಗ್ಯಾರೇಜ್ ಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಶಾಪ್ ಗಳ ಮೇಲೆ, ಅನಿರೀಕ್ಷಿತ ತಪಾಸಣೆ ಕೈಗೊಂಡು, 5 ಮಕ್ಕಳನ್ನು ರಕ್ಷಣೆ ಮಾಡಲಾಗಿದ್ದು, ತಪಾಸಣೆ ವೇಳೆ ದೊರೆತ ಮಕ್ಕಳಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಡೆಸುತ್ತಿರುವ ತೆರೆದ ತಂಗುದಾಣದಲ್ಲಿ ತಾತ್ಕಾಲಿಕ ಪುನರ್ವಸತಿಯನ್ನು ಕಲ್ಪಿಸಲಾಗಿದೆ.
ತಪಾಸಣೆ ವೇಳೆ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನಿತಾಲಕ್ಷ್ಮಿ, ಬಿ.ಸಿ.ಎಂ. ಅಧಿಕಾರಿ ಅನಿತಾ, ಕಾರ್ಮಿಕ ನಿರೀಕ್ಷಕ ಪ್ರದೀಪ, ಬಚಪನ್ ಬಚ್ಚೋ ಆಂದೋಲನದ ರಾಜ್ಯ ಸಂಯೋಜಕರು ಬಿನು ವರ್ಗೀಸ್, ಸಿ.ಆರ್.ಪಿ. ರಾಮಚಂದ್ರಯ್ಯ, ಮಕ್ಕಳ ಸಹಾಯವಾಣಿ ಸಂಯೋಜಕ ಮಂಜುನಾಥ, ರೇಷ್ಮೆ ಇಲಾಖೆ ಅಧಿಕಾರಿ ರಮೇಶ್, ಡಿಸಿಪಿಓ ಸಿಬ್ಬಂದಿ ಶಿವಪ್ಪ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮುರುಳಿ, ಶ್ರೀನಿವಾಸ್, ಶಶಿಕುಮಾರ್, ನರಸಿಂಹರಾಜು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..