ದೊಡ್ಡಬಳ್ಳಾಪುರ: ಚಾಲಕನನಿಯಂತ್ರಣ ತಪ್ಪಿದ ಟ್ರಾಕ್ಟರ್ ಉರುಳಿ ಬಿದ್ದ ಪರಿಣಾಮ ಇಬ್ಬರಿಗೆ ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ದೊಡ್ಡಬಳ್ಳಾಪುರ – ಹೊಸಹಳ್ಳಿ ನಡುವಿನ ದೊಡ್ಡಹಳ್ಳದ ಸಮೀಪದ ತಿರುವಿನಲ್ಲಿ ಸಂಭವಿಸಿದೆ.
ದೊಡ್ಡಬಳ್ಳಾಪುರದಿಂದ ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರಣ, ಚಾಲಕ ಹಾಗೂ ಮತ್ತೋರ್ವ ಸಣ್ಣ ಪುಟ್ಟಗಾಯಗಳೊಂದಿಗೆ ಪಾರಾಗಿದ್ದರೇ, ಟ್ರಾಕ್ಟರ್ ನಲ್ಲಿದ್ದ ಇನ್ನಿಬ್ಬರಿಗೆ ತೀವ್ರ ಪೆಟ್ಟಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಿತಲೇಖನಿಗೆ ಪೊಲೀಸ್ ಮೂಲಗಳು ತಿಳಿಸಿವೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..