ದೊಡ್ಡಬಳ್ಳಾಪುರ: ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಮಧುರೆ, ದೊಡ್ಡಬೆಳವಂಗಲ, ಸಾಸಲು ಹೋಬಳಿಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ, ಆಸ್ಪತ್ರೆ ದಾದಿಯರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮ ಆ19ರಂದು ರಂದು ಮಧ್ಯಾಹ್ನ 12 ಗಂಟೆಗೆ ತಾಲೂಕಿನ ದೊಡ್ಡಬೆಳವಂಗಲದಲ್ಲಿ ನಡೆಯಲಿದೆ.
ಕಸಬಾ, ನಗರ ವ್ಯಾಪ್ತಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ, ಆಸ್ಪತ್ರೆ ದಾದಿಯರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮ ಮಧ್ಯಾಹ್ನ 2.30 ಗಂಟೆಗೆ ತಾಲೂಕಿನ ಕೊನಘಟ್ಟದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಜಯಚಂದ್ರ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ರಾಜ್ಯ ಸಭಾ ಸದಸ್ಯಡಾ.ಎಲ್.ಹನುಮಂತಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್.ರಮೇಶ್ ಮತ್ತಿತರರು ಭಾಗವಹಿಸಲಿದ್ದಾರೆಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..