Site icon ಹರಿತಲೇಖನಿ

ಎಸ್.ಸಿ.ಎಸ್.ಪಿ/ ಟಿಎಸ್ ಪಿ ಯೋಜನೆಯ ಅನುದಾನ ಸಂಪೂರ್ಣ, ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಆರ್.ಲತಾ ತಾಕೀತು

Channel Gowda
Hukukudi trust

ಚಿಕ್ಕಬಳ್ಳಾಪುರ: ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಇಲಾಖೆಗಳಿಗೆ ಮೀಸಲಿಟ್ಟಿರುವ ಎಸ್.ಸಿ.ಎಸ್.ಪಿ/ ಟಿ.ಎಸ್. ಪಿ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಶೇ.100ರಷ್ಟು ಸಾಧನೆಯನ್ನು ಮಾಡಬೇಕು. ಈ ದಿಸೆಯಲ್ಲಿ ಆಯಾ ಇಲಾಖೆ ಮುಖ್ಯಸ್ಥರು ಹೆಚ್ಚಿನ ಮುತುವರ್ಜಿಯನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

Aravind, BLN Swamy, Lingapura

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ 2021-22ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್. ಪಿ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಲ್ಲಿ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಆಯಾ ಉದ್ದೇಶಗಳಿಗೆ ಮಾತ್ರವೇ ಬಳಕೆ ಮಾಡಬೇಕು.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಬೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಡಿ ವಿವಿಧ ಸಾಲ, ಸೌಲಭ್ಯಗಳಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಲಿದೆ. ಇದನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ಕೊಳವೆ ಬಾವಿಗಳನ್ನು ಕೊರೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬೆಸ್ಕಾಂ ಅಧಿಕಾರಿಗಳು ಈ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕವನ್ನು  ನಿಗದಿತ  ಅವಧಿಯಲ್ಲಿ  ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಕೆಲವು ನಿಗಮಗಳಲ್ಲಿ ಇನ್ನೂ ಎರಡು ಮೂರು ವರ್ಷಗಳ ಫಲಾನುಭವಿಗಳ ಆಯ್ಕೆ ಪಟ್ಟಿಯೇ ಅಂತಿಮ ಆಗಿಲ್ಲ. ಪಟ್ಟಿ ಸಲ್ಲಿಸದ ಶಾಸಕರನ್ನು ಖುದ್ದು ನೀವೇ ಭೇಟಿ ಮಾಡಿ, ಪಟ್ಟಿಯನ್ನು ಪೈನಲ್ ಮಾಡಿಸಿಕೊಂಡು, ಫಲಾನುಭವಿಗಳಿಗೆ ಸೌಲಭ್ಯ ದೊರಕಿಸುವ ಕೆಲಸ ನಿಗಮದ ಅಧಿಕಾರಿಗಳು ಮಾಡಬೇಕು. ಈ ದಿಸೆಯಲ್ಲಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಬಾಕಿ ಇರುವ ಎಲ್ಲಾ ಫಲಾನುಭವಿಗಳಿಗೂ ಶೀಘ್ರವೇ ಸೌಲಭ್ಯ ಒದಗಿಸಿಕೊಡಬೇಕು ಎಂದು ಆಯಾ ನಿಗಮಗಳ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚಿಸಿದರು.

Aravind, BLN Swamy, Lingapura

ಸರ್ಕಾರದ ಆದೇಶದಂತೆ ಆ.23 ರಿಂದ 9 ರಿಂದ 12 ತರಗತಿವರೆಗೆ ತರಗತಿಗಳು ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಎಲ್ಲಾ ಶಾಲಾ ಕೊಠಡಿಗಳು ಹಾಗೂ  ಸಮಾಜ ಕಲ್ಯಾಣ  ಇಲಾಖೆ ಸೇರಿದಂತೆ ಇತರೆ ಇಲಾಖೆಗಳಡಿ ಬರುವ ಹಾಸ್ಟೆಲ್ ಗಳ ಸ್ವಚ್ಚತೆಯನ್ನು ಮಾಡಬೇಕು. ಸಂಭಾವ್ಯ ಮೂರನೇ ಕರೋನ  ಅಲೆ ಬರುತ್ತದೋ  ಇಲ್ಲೋ  ಗೊತ್ತಿಲ್ಲ ಆದರೂ  ಕೂಡ, ಪ್ರತಿ ತಾಲೂಕಿಗೆ ಒಂದರಂತೆ ವಸತಿ ಶಾಲೆಗಳನ್ನು ಮೀಸಲಿಟ್ಟು, ಉಳಿದಂತೆ ಎಲ್ಲಾ ವಸತಿ ಶಾಲೆ, ಹಾಸ್ಟೆಲ್ ಗಳನ್ನು ಸ್ಯಾನಿಟೈಜ್ ಕಾರ್ಯ ಸೇರಿದಂತೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು  ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಸತ್ಯಸಾಯಿ ಟ್ರಸ್ಟ್ ನವರು ನೀಡುತ್ತಿರುವ ಸಾಯಿಶೂರ್ ಪೌಷ್ಠಿಕ ಹಾಲಿನ ಫೌಡರ್ ಅನ್ನು ಅಗತ್ಯವುಳ್ಳ ಎಲ್ಲಾ ಮಕ್ಕಳಿಗೂ ಸೂಕ್ತ ರೀತಿಯಲ್ಲಿ ವಿತರಣೆ ಮಾಡಬೇಕು. ಎಷ್ಟು ಮಕ್ಕಳಿಗೆ ಯಾವ ಪ್ರಮಾಣದಲ್ಲಿ ಫೌಡರ್ ನೀಡಲಾಗುತ್ತಿದೆ. ಬೇಡಿಕೆ ಎಷ್ಟು, ವಿತರಣೆ ಎಷ್ಟು,  ಮಕ್ಕಳ ಉಪಯೋಗದ   ಕುರಿತು ಸಂಪೂರ್ಣ ವರದಿಯನ್ನು ಕಚೇರಿಗೆ ಸಲ್ಲಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶಿವಕುಮಾರ್ ಮಾತನಾಡಿ, 2021-22ನೇ ಸಾಲಿನ ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮಗಳಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ಕಾರ್ಯನಿರ್ವಾಹಕ ಸಿಬ್ಬಂದಿಗೆ ವೇತನ, ವಿದ್ಯಾರ್ಥಿಗಳಿಗೆ ನಿವಾಸಿ ಶಾಲೆಗಳು, ಕಾಲೇಜು ವಿದ್ಯಾರ್ಥಿಗಳಿಗೆ ಪುರಸ್ಕಾರ, ಇತರೆ ರೀಯಾಯ್ತಿಗಳು, ಜೇಷ್ಠತೆ ಪಡೆದ ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಒಟ್ಟು 16.10 ಕೋಟಿ ಅನುದಾನ ಗುರಿ ನಿಗಧಿ ಮಾಡಲಾಗಿದ್ದು, ಈ ಪೈಕಿ ವರದಿ ಮಾಸಾಂತ್ಯದವರೆಗೆ ಶೇ.30.88ರಷ್ಟು ಆರ್ಥಿಕ ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.

ಅಸಮರ್ಪಕ ಮಾಹಿತಿ ನೀಡಿದ ಅಧಿಕಾರಿಗಳಿಗೆ ನೋಟೀಸ್: ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಅಸಮರ್ಪಕ ಮಾಹಿತಿ ನೀಡಿದ ಕೆಲವೊಂದು ಇಲಾಖೆ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಸಭೆಯಲ್ಲಿ ಒಂದೆರಡು ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ನಿಗಧಿಪಡಿಸಿದ ಅಗತ್ಯ ಮಾಹಿತಿ ನೀಡದೇ ಅಸಮರ್ಪಕ ಮಾಹಿತಿ ನೀಡಿದರು. ಇದರಿಂದ ಕೆರಳಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಎಸ್.ಸಿ.ಎಸ್.ಪಿ/ ಟಿಎಸ್ ಪಿ ಅಧಿನಿಯಮದಡಿ ನೋಟೀಸ್ ನೀಡಿ, ಶಿಸ್ತುಕ್ರಮ ಜರುಗಿಸಲು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಧನುರೇಣುಕಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶಿವಕುಮಾರ್ ಹಾಗೂ ಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

Exit mobile version