ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕಿನ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆಯ 1 ರಿಂದ 31 ವಾರ್ಡ್ ಗಳಿಗೆ ಘೋಷಿಸಿರುವ ಚುನಾವಣೆಗೆ 2021ರ ಸೆಪ್ಟೆಂಬರ್ 03ರ ಶುಕ್ರವಾರದಂದು ನಡೆಯಲಿರುವ ಮತದಾನದ ಅವಧಿಯನ್ನು ಒಂದು ಗಂಟೆಗಳ ಕಾಲ ವಿಸ್ತರಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.
ಕೋವಿಡ್ ಸೋಂಕಿನ ಭೀತಿ ಹಿನ್ನೆಲೆ, ಚುನಾವಣೆಯಲ್ಲಿ ಸಾರ್ವಜನಿಕ ಅಂತರ ಕಾಪಾಡಿಕೊಂಡು ಎಲ್ಲ ಮತದಾರರಿಗೂ ಮತದಾನ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರು ಮುಕ್ತವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡುವ ದೃಷ್ಟಿಯಿಂದ ಪೂರ್ವಾಹ್ನ 07.00 ಗಂಟೆಯಿಂದ ಸಾಯಂಕಾಲ 05.00 ಗಂಟೆಯವರೆಗೆ ನಿಗದಿಯಾಗಿದ್ದ ಮತದಾನದ ಅವಧಿಯನ್ನು ಒಂದು ಗಂಟೆಗಳ ಕಾಲ ಅಂದರೆ ಸಾಯಂಕಾಲ 06.00 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……