ದೊಡ್ಡಬಳ್ಳಾಪುರ: ರಾಜ್ಯ ಚುನಾವಣಾ ಆಯೋಗವು ದೊಡ್ಡಬಳ್ಳಾಪುರ ನಗರಸಭೆ ಸಾರ್ವತ್ರಿಕ ಚುನಾವಣೆಯ ವೆಚ್ಚ ವೀಕ್ಷಕರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ರಮೇಶ್ ರೆಡ್ಡಿ ಅವರನ್ನು ನೇಮಕ ಮಾಡಿದೆ.
ದೊಡ್ಡಬಳ್ಳಾಪುರ ನಗರಸಭೆಯ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚಗಳ ಪರಿಶೀಲನೆಗಾಗಿ ಇವರನ್ನು ನೇಮಕ ಮಾಡಲಾಗಿದ್ದು, ಅಭ್ಯರ್ಥಿಗಳಿಗೆ 2.00 ಲಕ್ಷಗಳ ಚುನಾವಣಾ ವೆಚ್ಚ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..