ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೋವಿಡ್-19 ಲಸಿಕಾಕರಣ ಅಭಿಯಾನ ಕಾರ್ಯಕ್ರಮದಲ್ಲಿ ಒಟ್ಟು 30,242 ಜನರು ಲಸಿಕೆಯನ್ನು ಪಡೆದಿದ್ದಾರೆ.
ವಿಶೇಷ ಕೋವಿಡ್-19 ಲಸಿಕಾಕರಣ ಅಭಿಯಾನದಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲ್ಲೂಕಿಗೆ ತಲಾ 10,000ದಂತೆ ಒಟ್ಟು 40,000 ಲಸಿಕೆಗಳನ್ನು ನೀಡಲು ಗುರಿಯನ್ನು ನಿಗದಿಪಡಿಸಲಾಗಿತ್ತು. ಅದರಂತೆ,
ದೇವನಹಳ್ಳಿ ತಾಲ್ಲೂಕಿನಲ್ಲಿ 6,543, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 7,521, ನೆಲಮಂಗಲ ತಾಲ್ಲೂಕಿನಲ್ಲಿ 8,307 ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ 7,871 ಜನರು ಲಸಿಕೆಯನ್ನು ಪಡೆದಿದ್ದಾರೆ ಹಾಗೂ ಈ ಅಭಿಯಾನದಲ್ಲಿ 20,866 ಜನರು ಮೊದಲ ಹಾಗೂ 9,376 ಜನರು ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯನ್ನು ಇಲ್ಲಿಯವರೆಗೆ 6,20,560 ಜನರು ಪಡೆದಿದ್ದು, ದೇವನಹಳ್ಳಿ ತಾಲ್ಲೂಕಿನಲ್ಲಿ 1,59,084, ದೊಡ್ಡಬಳ್ಳಾಪುರ 1,78,176, ನೆಲಮಂಗಲ ತಾಲ್ಲೂಕಿನಲ್ಲಿ 1,25,811 ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ 1,57,489 ಜನರು ಲಸಿಕೆಯನ್ನು ಪಡೆದಿದ್ದು, ಈ ಪೈಕಿ 4,72,222 ಜನರು ಮೊದಲ ಹಾಗೂ 1,48,338 ಜನರು ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಕೋವಿಡ್ ಕೇಂದ್ರಗಳಲ್ಲಿ ಲಸಿಕೆಗಳು ಲಭ್ಯವಿದ್ದು, ಸಾರ್ವಜನಿಕರು ಲಸಿಕೆಯನ್ನು ಪಡೆಯುವ ಮೂಲಕ ಕೋವಿಡ್ ವಿರುದ್ಧ ಹೋರಾಡಲು ಸಹಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..