ದೊಡ್ಡಬಳ್ಳಾಪುರ: ಸೆ.3 ರಂದು ನಡೆಯಲಿರುವ ನಗರಸಭೆ ಚುನಾವಣೆ ಆರಂಭಕ್ಕೆ ಕೆಲವೇ ಗಂಟೆಗಳು ಮಾತ್ರ ಉಳಿದಿದ್ದು, ಚುನಾವಣೆ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಅಂತಿಮ ಹಂತದ ಸಿದ್ದತಾ ಕಾರ್ಯದಲ್ಲಿ ತೊಡಗಿದ್ದಾರೆ.
ನಾಳೆ ನಡೆಯಲಿರುವ 31 ಸ್ಥಾನಗಳಿಗಾಗಿ ನಡೆಯುವ ಚುನಾವಣೆಗೆ 119 ಮಂದಿ ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.
ಕಾಂಗ್ರೆಸ್-31, ಬಿಜೆಪಿ -30, ಜೆಡಿಎಸ್-28, ಸಿಪಿಐ(ಎಂ)-2, ಬಿಎಸ್‍ಪಿ-3 , ಕನ್ನಡ ಪಕ್ಷ-5, ಕೆ.ಆರ್.ಎಸ್-2, ಉತ್ತಮ ಪ್ರಜಾಕೀಯ ಪಕ್ಷ-1, ಎಸ್.ಡಿ.ಪಿ.ಐ-2, ಹಾಗೂ ಪಕ್ಷೇತರರು -15 ಸೇರಿ 119 ಮಂದಿ ಅಂತಿಮ ಕಣದಲ್ಲಿದ್ದು, ಕಣದಲ್ಲಿ ಮಹಿಳಾ ಮೀಸಲಾತಿ ಅನ್ವಯ 14 ಸ್ಥಾನಗಳು ಮೀಸಲಿರಿಸಲಾಗಿದೆ.
ಪೊಲೀಸರ ಸರ್ಪಗಾವಲು: ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸಿದ್ದತೆ ಆರಂಭಿಸಿದ್ದಾರೆ. 200 ಪೊಲೀಸ್, 25 ಎಎಸ್ಐ, 8 ಪಿಎಸ್ ಐ, 3 ಇನ್ಸ್ಪೆಕ್ಟರ್, 2ಡಿಆರ್ ತಂಡ, ಒಬ್ಬರು ಡಿವೈಎಸ್ಪಿ ಹಾಗೂ ನಾಲ್ಕು ಮಂದಿ ಸೆಕ್ಟರ್ ಅಧಿಕಾರಿಗಳು ಭದ್ರತಾ ಕಾರ್ಯನಿರ್ವಹಿಸಲಿದ್ದಾರೆ.
ಇಂದು ನಗರದ ಮತಘಟ್ಟೆ ಕೇಂದ್ರದ ಬಳಿ ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಸ್ಥಳಗಳಿಗೆ ಸಿಬ್ಬಂದಿಗಳನ್ನು ನೇಮಿಸಿದರು.
ಸಿಬ್ಬಂದಿಗಳಿಗೆ ಅಗತ್ಯ ವಸ್ತುಗಳ ನೆರವು: ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಗೋವಿಂದ್ ಚುನಾವಣೆ ಕಾರ್ಯದಲ್ಲಿ ತೊಡಗಲಿರುವ ಸಿಬ್ಬಂದಿಗಳಿಗೆ ಸ್ವಂತ ವೆಚ್ಚದಲ್ಲಿ ಅಗತ್ಯವಸ್ತುಗಳನ್ನು ಕಿಟ್ ವಿತರಿಸುತ್ತಿದ್ದಾರೆ.
ಈ ಕಿಟ್ ನಲ್ಲಿ ಬಿಸ್ಕೆಟ್ ಪ್ಯಾಕೆಟ್, ಸೇಬು, ಬಾಳೆಹಣ್ಣು, ಟೂತ್ ಬ್ರೇಶ್, ಪೇಸ್ಟ್, ಸೋಪ್ ಹಾಗೂ ಮಾಸ್ಕ್ ಇರಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..