ಹುಬ್ಬಳ್ಳಿ: ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ರಾತ್ರಿ ಕಫ್ರ್ಯೂ ತೆರವುಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಏರಿಕೆ ಇರುವುದರಿಂದ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ. ಇದನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.
ಜನರ ಜೀವನಕ್ಕೂ ತೊಂದರೆಯಾಗಬಾರದು ಹಾಗೂ ಕೋವಿಡ್ ನಿಯಂತ್ರಣಕ್ಕೂ ಬರಬೇಕು. ಈ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ನೀಡುವ ವರದಿ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..