ದೊಡ್ಡಬಳ್ಳಾಪುರ: ನಾಳೆ (ಸೆ.3)ರಂದು ನಡಯಲಿರುವ ನಗರಸಭೆ ಚುನಾವಣೆ ಹಿನ್ನಲೆ ನಗರ ವ್ಯಾಪ್ತಿಯ ಮೂರು ಕಿಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.
ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮತ್ತು ಮುಕ್ತವಾಗಿ ನಡೆಸುವಂತಾಗಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರಸಭೆ ಗಡಿಯಿಂದ 3.ಕಿಮೀ ವ್ಯಾಪ್ತಿಯಲ್ಲಿ ಇಂದು (ಸೆ.2) ಸಂಜೆ 7 ಗಂಟೆಯಿಂದ ಸೆ.3ರ ಮಧ್ಯರಾತ್ರಿಯವರೆಗೆ ಎಲ್ಲಾ ವಿಧದ ಮದ್ಯದ ಅಂಗಡಿಗಳನ್ನು ಮುಚ್ಚಿಸಿ (ದೊಡ್ಡಬಳ್ಳಾಪುರ ಕೆಎಸ್ ಬಿಸಿಎಲ್ ಡಿಪೋ ಹೊರತುಪಡಿಸಿ) ಮದ್ಯ ಮಾರಾಟ ನಿಷೇಧಿಸಿರುವುದಾಗಿ ಆದೇಶಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..