Site icon ಹರಿತಲೇಖನಿ

ಬೆಂ.ಗ್ರಾ.ಜಿಲ್ಲೆ: 6ನೇ ತರಗತಿಗೆ ಸೇರಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Aravind, BLN Swamy, Lingapura

ಪರಿಶಿಷ್ಟ ಜಾತಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಠಿಯಿಂದ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು, ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಇಲಾಖೆಯಿಂದ ಭರಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆ ಮತ್ತು ವಿವರಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು 2021ರ ಸೆಪ್ಟೆಂಬರ್ 18 ರೊಳಗೆ ಸಲ್ಲಿಸುವುದು.

ಆಸಕ್ತ ವಿದ್ಯಾರ್ಥಿಗಳು ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ, ದೂ.ಸಂ.: 080-29787447, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ.: 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ.: 080-27623681, ಹೊಸಕೋಟೆ ತಾಲ್ಲೂಕು ದೂ.ಸಂ.: 080-27931528 ಹಾಗೂ ನೆಲಮಂಗಲ ತಾಲ್ಲೂಕು ದೂ.ಸಂ.: 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aravind, BLN Swamy, Lingapura

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

Exit mobile version