ದೊಡ್ಡಬಳ್ಳಾಪುರ: ಸೆ.3ರಂದು ನಡೆದ ನಗರಸಭೆ ಚುನಾವಣೆಯಲ್ಲಿ ಆಯ್ಕೆಯಾದ ಮೂವರು ಸದಸ್ಯರನ್ನು, ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸತತ ಆರು ಬಾರಿ ನಗರಸಭೆ ಸದಸ್ಯರಾಗಿ ಆಯ್ಕೆಯಾದ ಟಿ.ಎನ್.ಪ್ರಭುದೇವ, ನೂತನ ಸದಸ್ಯರಾಗಿ ಆಯ್ಕೆಯಾದ ಶ್ರೀನಗರ ನಾಗರಾಜ್ ಮೇಷ್ಟ್ರು ಮತ್ತು ನಾಗರತ್ನಮ್ಮ ಕೃಷ್ಣ ಮೂರ್ತಿ ಅವರನ್ನು ಸಂಘದ ವತಿಯಿಂದ ಕಲಾಭವನದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಲಾವಿದರ ಸಂಘದ ಅದ್ಯಕ್ಷ ಗುಡ್ಡದಳ್ಳಿ ರಾಮಾಂಜಿನಪ್ಪ, ಉಪಾಧ್ಯಕ್ಷರಾದ ಜಿ.ಮುನಿರಾಜು, ನರಸಿಂಹಪ್ಪ , ಖಜಾಂಚಿ ಹೆಚ್ ಮುನಿಪಾಪಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್, ಸಹ ಕಾರ್ಯದರ್ಶಿ ಹೆಚ್.ಪ್ರಕಾಶ್ ರಾವ್ ಚೌಹಾಣ್, ನಿರ್ದೇಶಕ ನಾಗದೇನಹಳ್ಳಿ ಮಂಜುನಾಥ್ ಸೇರಿದಂತೆ ಸಂಘದ ಪದಾಧಿಕಾರಿಗಳು ಬಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..