ರಾಮನಗರ: ಪಾಲಿಕೆ ಚುನಾವಣೆ ಬಳಿಕ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಶನಿವಾರ ಸಂಜೆ ಕಂದಾಯ ಸಚಿವ ಆರ್.ಅಶೋಕ್ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಜೆಡಿಎಸ್ ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ದೊಡ್ಡಬಳ್ಳಾಪುರ ನಗರಸಭೆ ಹಾಗೂ ಕಲಬುರಗಿ ಪಾಲಿಕೆಯಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್.ಅಶೋಕ್, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಬಹುತೇಕ ಖಚಿತವಾಗಿದೆ. ಈ ಕುರಿತು ಕುಮಾರಸ್ವಾಮಿಯವರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ಕಲಬುರಗಿ ಪಾಲಿಕೆ ಮೈತ್ರಿ ವಿಚಾರಕ್ಕೆ ಸೋಮವಾರ ಸಂಜೆಯ ವೇಳೆಗೆ ದೇವೇಗೌಡರ ಜೊತೆಗಿನ ಸಭೆಯ ನಂತರ ವಿಷಯ ತಿಳಿಸುವುದಾಗಿ ಹೇಳಿದ್ದಾರೆ ಎಂದು ಪಿಟಿ ವರದಿ ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..