ಚಿಕ್ಕಮಗಳೂರು: ದೇವಸ್ಥಾನ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಹಿಂದೂ ಪರ ಕಾರ್ಯಕರ್ತರು ಇಂದು ಮೂಡಿಗೆರೆಯಲ್ಲಿ ಬಿಜೆಪಿ ಸಂಸದರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.
ಮೂಡಿಗೆರೆ ಬಸ್ ನಿಲ್ದಾಣದ ಸಮೀಪದ ಈ ಘಟನೆ ನಡೆದಿದ್ದು, ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಪ್ರತಾಪ್ ಸಿಂಹಗೆ ಮುತ್ತಿಗೆ ಹಾಕಿದ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ದೇವಸ್ಥಾನಗಳನ್ನು ಕೆಡವುತ್ತಿರುವುದನ್ನು ವಿರೋಧಿಸಿ ಕಪ್ಪುಪಟ್ಟಿ ಪ್ರದರ್ಶನ ಮಾಡಿ ಆಕ್ರೋಶ ಹೊರ ಹಾಕಿದರು.
ಈ ವೇಳೆ ಪ್ರತಿಭಟನಾಕಾರರನ್ನು ನಿಗ್ರಹಿಸಲು ಪೊಲೀಸ್ ಸಿಬ್ಬಂದಿ ಹಾಗೂ ಸಂಸದರು ಬಹಳಷ್ಟು ಬೆವರು ಸುರಿಸಬೇಕಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..