ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 12 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 15 ಕರೊನಾ ಪ್ರಕರಣಗಳು ವರದಿಯಾಗಿದ್ದರೆ, ದೊಡ್ಡಬಳ್ಳಾಪುರ ತಾಲೂಕಿನ ಓರ್ವ ಸೋಂಕಿತ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ 04 ಪುರುಷರು, 04 ಮಹಿಳೆಯರು ಸೇರಿ 08. ಹೊಸಕೋಟೆ ತಾಲೂಕಿನ 03 ಪುರುಷರು, ಓರ್ವ ಮಹಿಳೆ ಸೇರಿ 04. ದೇವನಹಳ್ಳಿ ತಾಲೂಕಿನ ಓರ್ವ ಪುರುಷ, ಓರ್ವ ಮಹಿಳೆ ಸೇರಿ 02. ದೊಡ್ಡಬಳ್ಳಾಪುರ ತಾಲೂಕಿನ ಓರ್ವ ಪುರುಷ ಸೇರಿದಂತೆ ಒಟ್ಟು 15 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮೃತರ ವರದಿ: ದೊಡ್ಡಬಳ್ಳಾಪುರ ತಾಲೂಕಿನ 74 ವರ್ಷದ ಓರ್ವ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಬುಲೆಟಿನ್ ವರದಿ ತಿಳಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ 49 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 159 ಕ್ಕೆ ಏರಿಕೆಯಾಗಿದೆ. ಅಲ್ಲದೆ 2115 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 1283 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..