ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2021-22ನೇ ಸಾಲಿನ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗಾಗಿ ಧೈರ್ಯ ಹಾಗೂ ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಿಸಿದ 6 ರಿಂದ 18 ವರ್ಷದೊಳಗಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮಕ್ಕಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಧೈರ್ಯ ಹಾಗೂ ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಿಸಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರಾಷ್ಟ್ರ ಮಟ್ಟದಲ್ಲಿ ಶೌರ್ಯ ಪ್ರಶಸ್ತಿಯನ್ನು ನವದೆಹಲಿಯ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ ಫೆರ್ ಇವರು ಪ್ರಧಾನ ಮಾಡುತ್ತಾರೆ. ಪ್ರಕರಣವು 2020 ಜುಲೈ 1 ರಿಂದ 2021 ಸೆಪ್ಟೆಂಬರ್ 30 ರೊಳಗೆ ನಡೆದಿರಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 206, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ 2021 ಅಕ್ಟೋಬರ್ 15 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-23330846, 22925898, ಕೌನ್ಸಿಲ್ ಫಾರ್ ಚೈಲ್ಡ್ ವೆಲ್ ಫೆರ್, ಬೆಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಅನಿತಾಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..