ಬೆಂಗಳೂರು: ರೈತ ಸಮುದಾಯಕ್ಕೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದು, ಸ್ಮಾಟ್ ಹಾಗೂ ಪ್ರೀಪೈಡ್ ಮೀಟರ್ ಗಳನ್ನು ರೈತರಿಗೆ ಅಳವಡಿಸುವುದಿಲ್ಲ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ಹಿ ನ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವ ಸುನೀಲ್ ಕುಮಾರ್, ಕೇಂದ್ರ ಸರ್ಕಾರದ ಸೂಚನೆಯಂತೆ ಸದ್ಯಕ್ಕೆ ಮೂರು ಹಂತದಲ್ಲಿ ಸ್ಮಾಟ್ ಹಾಗೂ ಪ್ರೀಪೈಡ್ ಮೀಟರ್ ಗಳನ್ನೂ ವಿದ್ಯುತ್ ಬಳಕೆಯ ಗ್ರಾಹಕರಿಗೆ ಅಳವಡಿಸಲಾಗುತ್ತದೆ, ರೈತರಿಗೆ ಈ ಮೀಟರ್ಗಳನ್ನು ಅಳವಡಿಸುವುದಿಲ್ಲ ಎಂದು ಹೇಳಿದರು.
ಮೂರು ಹಂತಗಳಲ್ಲಿ ಶೇ.15ರಷ್ಟು ಗ್ರಾಹಕರಿಗೆ ಪ್ರಿಪೈಡ್ ಮತ್ತು ಸ್ಮಾರ್ಟ್ ಮೀಟರ್ ಅಳವಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಆರಂಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸ್ಮಾರ್ಟ್ ಹಾಗೂ ಪ್ರಿಪೈಡ್ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….