Site icon Harithalekhani

ಅಪಘಾತಕ್ಕೆ ಒಳಗಾಗಿದ್ದ ಅಣಗಲಪುರ ಸರ್ಕಾರಿ ಶಾಲೆ ಶಿಕ್ಷಕಿ ನಿಧನ

ದೊಡ್ಡಬಳ್ಳಾಪುರ: ತಾಲೂಕಿನ ಅಣಗಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಬಿ.ಎಸ್. ರಾಜಮ್ಮ (46 ವರ್ಷ) ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಶಾಂತಿನಗರದ ನಿವಾಸಿಯಾಗಿದ್ದ ರಾಜಮ್ಮನವರು ಅಪಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಅಂತ್ಯಕ್ರಿಯೆ ಬರಗೂರಿನಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಶಿಕ್ಷಕಿ ರಾಜಮ್ಮನವರ ಅಕಾಲಿಕ ಮರಣಕ್ಕೆ ಬಿಇಒ ಶುಭಮಂಗಳ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಜೈಕುಮಾರ್ ಹಾಗೂ ಶಿಕ್ಷಕ ಸಮುದಾಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

Exit mobile version