ಚಿಕ್ಕಬಳ್ಳಾಪುರ: ನಂದಿಬೆಟ್ಟದ ಕಾರಹಳ್ಳಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೃಹತ್ ಮರಗಳು ಮುರಿದು ಹೋಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತ ನಂತರ ಘಟನಾ ಸ್ಥಳದಿಂದ ಕಾರಿನಲ್ಲಿದ್ದವರು ಪರಾರಿಯಾಗಿದ್ದು,ಅಪಘಾತವಾದ ಕಾರಿಗೆ ನಂಬರ್ ಪ್ಲೇಟ್ ಇಲ್ಲ ಎನ್ನಲಾಗಿದೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರಿಗೆ ತಿಳಿಸದೆ ಅಪಘಾತವಾದ ಕಾರನ್ನು ಅಪರಿಚಿತರು ಕೊಂಡೋಯ್ಯುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……