ಬೆಂಗಳೂರು: ಭಾರತ್ ಬಂದ್ ಪ್ರತಿಭಟನೆ ವೇಳೆ ಗೊರಗುಂಟೆ ಪಾಳ್ಯ ಜಂಕ್ಷನ್ನಲ್ಲಿ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ, ರೈತ ಮುಖಂಡನದ್ದೇನಲಾಗುತ್ತಿರುವ ಕಾರು ಹರಿದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೈತ ಸಂಘಟನೆಗಳಿಂದ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಗೊರಗುಂಟೆ ಪಾಳ್ಯ ಜಂಕ್ಷನ್ನಲ್ಲಿ ಪ್ರತಿಭಟನಾ ಜಾಥಾ ನಡೆಯುತ್ತಿತ್ತು. ಈ ವೇಳೆ ಕೆಲವು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು.
ಈ ವೇಳೆ ರೈತ ಮುಖಂಡನ ಕಾರನ್ನ ಅಡ್ಡ ಹಾಕಲು ಡಿಸಿಪಿ ಧರ್ಮೇಂದ್ರ ಕುಮಾರ್ ಮುಂದಾಗಿದ್ದಾರೆ. ಆಗ ಕಾರು ಚಾಲಕ ಗಾಡಿಯನ್ನ ನಿಲ್ಲಿಸದೇ ಮುನ್ನುಗ್ಗಿಸಿದ್ದಾನೆ. ಇದರಿಂದ ಕಾರಿನ ಟೈರ್ ಡಿಸಿಪಿ ಕಾಲಿನ ಮೇಲೆ ಹರಿದಿದೆ. ಕೂಡಲೇ ಧರ್ಮೇಂದ್ರ ಕುಮಾರ್ ಕಾಲನ್ನ ಎಳೆದುಕೊಂಡು ಅಪಾಯದಿಂದ ಪಾರಾಗಿದ್ದಾರೆ.
ಘಟನೆ ಕುರಿತು ಕಾರಿನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……