ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ನೆಲದಾಂಜನೇಯ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ತಾಲೂಕು ಕಚೇರಿ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಿರತ ಮುಖಂಡರು ಮಾತನಾಡುತ್ತಿದ್ದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಹಲವು ಪಕ್ಷಗಳ ಹಾಗೂ ಸಂಘಟನೆಗಳ ಮುಖಂಡರು ಭಾಗವಹಿಸಿದ್ದಾರೆ.
ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟ ಮುಖಂಡರು: ಇಂದು ಕರೆ ನೀಡಿರುವ ಭಾರತ್ ಬಂದ್ಗೆ ರಾಜ್ಯಾದ್ಯಂತ ಹೆಚ್ಚಿನ ಜನ ಬೆಂಬಲ ದೊರಕದೆ ಭಾರತ್ ಬಂದ್ ವಿಫಲವಾಗಿದ್ದು, ಜನಜೀವನ ಯಥಾಸ್ಥಿತಿಯಲ್ಲಿದೆ ಎಂದು ಮಾಧ್ಯಮಗಳು ವರದಿ ಮಾಡಿರುವುದು ಕೆಲ ಮುಖಂಡರನ್ನು ಕೆರಳಿಸಿದೆ.
ಭಾಷಣದ ವೇಳೆ ಕೆಲ ಮುಖಂಡರು ಮಾಧ್ಯಮಗಳ ವಿರುದ್ದ ವಾಚಮಾಗೋಚರವಾಗಿ ನಾಲಿಗೆ ಹರಿಬಿಟ್ಟು ಮಾತನಾಡಿದ್ದು, ವರದಿಗೆ ತೆರಳಿರುವ ಮಾಧ್ಯಮ ಪ್ರತಿನಿಧಿಗಳ ಬೇಸರಕ್ಕೆ ಕಾರಣವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……