ನವದೆಹಲಿ: ಕಮ್ಯುನಿಸ್ಟ್ ಪಕ್ಷದ (ಸಿಪಿಐ) ನಾಯಕ ಕನ್ಹಯ್ಯ ಕುಮಾರ್ ಅವರು ರಾಹುಲ್ ಗಾಂಧಿ ಸಮ್ಮುಖದಲ್ಲಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾದರು.
ಪಕ್ಷ ಸೇರ್ಪಡೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಒಂದು ರಾಜಕೀಯ ಪಕ್ಷ ಎನ್ನುವ ಕಾರಣಕ್ಕೆ ನಾನು ಕಾಂಗ್ರೆಸ್ ಸೇರುತ್ತಿಲ್ಲ. ಬದಲಾಗಿ ಇದು ದೇಶದ ಅಂತ್ಯಂತ ಹಳೆಯ ಹಾಗೂ ಪ್ರಜಾಪ್ರಭುತ್ವದ ಪಕ್ಷ. ನಾನು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇರಿಸಿಕೊಂಡವನು. ಕೇವಲ ನಾನು ಮಾತ್ರವಲ್ಲ ದೇಶದ ಸಾಕಷ್ಟು ಜನರು ಕಾಂಗ್ರೆಸ್ ಇಲ್ಲದೆ ದೇಶ ಉಳಿಯುವುದಿಲ್ಲ ಎಂದು ನಂಬಿದವರಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷವು ದೊಡ್ಡ ಹಡಗಿನಂತಿದೆ. ಅದನ್ನು ಉಳಿಸಿದರೆ, ಮಹಾತ್ಮ ಗಾಂಧಿಯವರ ಏಕತೆ, ಭಗತ್ ಸಿಂಗ್ ಅವರ ಧೈರ್ಯ ಮತ್ತು ಬಿ.ಆರ್.ಅಂಬೇಡ್ಕರ್ ಅವರ ಸಮಾನತೆಯ ಕಲ್ಪನೆಯನ್ನು ಸಹ ರಕ್ಷಿಸಿದಂತಾಗುತ್ತದೆ. ಅ ಕಾರಣ ನಾನು ಕಾಂಗ್ರೆಸ್ ಪಕ್ಷವನ್ನು ಸೇರಿದೆ ಎಂದು ಕನ್ಹಯ್ಯಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಗುಜರಾತ್ ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಮಾತನಾಡಿ, ಕಾರಣಾಂತರಗಳಿಂದ ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರಲು ಆಗುತ್ತಿಲ್ಲ. ಆದರೆ, ಈ ಪಕ್ಷಕ್ಕೆ ನನ್ನ ಬೆಂಬಲ ಮುಂದುವರೆಯುತ್ತದೆ. ಹಾಗೂ ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಮೂಲಕ ಎದುರಿಸುತ್ತೇನೆ ಎಂದರು.
2019ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಕನ್ಹಯ್ಯ ಕುಮಾರ್, ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಸೇರಿದ್ದರು. ತಮ್ಮ ತವರು ಬಿಹಾರದ ಬೆಗುಸರಾಯ್ ಕ್ಷೇತ್ರದಿಂದ ಬಿಜೆಪಿಯ ಗಿರಿರಾಜ್ ಸಿಂಗ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.
ದಲಿತ ನಾಯಕರಾಗಿರುವ, ಜಿಗ್ನೇಶ್ ಮೇವಾನಿ ಸದ್ಯ ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಶಾಸಕರಾಗಿದ್ದಾರೆ.
ಬಿಹಾರದಲ್ಲಿ ಕಾಂಗ್ರೆಸ್‌ಗೆ ಚೈತನ್ಯ ನೀಡಲು ಕನ್ಹಯ್ಯ ಕುಮಾರ್ ಅವರ ಸೇರ್ಪಡೆಯು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……