ವಿಜಯನಗರ: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಶನಿವಾರ ಅಸ್ತಿತ್ವಕ್ಕೆ ಬಂದಿದೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಜಿಲ್ಲೆಯನ್ನು ಉದ್ಘಾಟಿಸಿದರು. ವಿಜಯಸ್ತಂಭ ಅನಾವರಣಗೊಳಿಸಿದ ಸಿಎಂ, ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ಆನಂದ್ ಸಿಂಗ್ ಸಂಭ್ರಮ ಪಡುವಗಳಿಗೆ. ಅವರು ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ ಎಂದರು.
ಸಾರಿಗೆ ಸಚಿವ ಶ್ರೀರಾಮುಲು ಮಾತನಾಡಿ, ಆಡಳಿತ ವ್ಯವಸ್ಥೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರದಂತೆ ಹೊಸ ಜಿಲ್ಲೆ ಅಸ್ವಿತ್ವಕ್ಕೆ ಬಂದಿದ್ದು, ನೂತನ ಜಿಲ್ಲೆ ವಿಜಯನಗರ ಸಾಮ್ರಾಜ್ಯದಂತೆ ವೈಭವಯುತವಾಗಿ ಮೆರೆಯಬೇಕು ಎಂದು ಹೇಳಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….