ಬೆಂಗಳೂರು: 2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ಯತೆಯ ವಿಸ್ತರಣೆ ಹಾಗೂ ಜನಪ್ರಿಯತ ಕಾರ್ಯಕ್ರಮವನ್ನು ಅಳವಡಿಸಲು ಆರ್‌ಕೆವಿವೈ ಯೋಜನೆಯಡಿ ರೂ 7234 ಕೋಟಿಗಳ ಅನುದಾನವನ್ನು ಒದಗಿಸಲಾಗಿದ್ದು ಮುಂಬರುವ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ.
ಕೃಷಿ ಮೂಲಭೂತಸೌಕರ್ಯ ನಿಧಿ ಯೋಜನೆಯಡಿಯಲ್ಲಿ ಕೋಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಮತ್ತು ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಗೆ ಶೇ.3 ಸಹಾಯಧನ ನೀಡಲಾಗುವುದು. ಈ ಸಂಬಂಧ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳು ಪ್ರಸ್ತಾವನೆಯನ್ನು ನೇರವಾಗಿ ಕೇಂದ್ರ ಸರ್ಕಾರದ ( AIF ) ಪೋರ್ಟಲ್ ನಲ್ಲಿ ಅಪಲೋಡ್ ಮಾಡಬೇಕು ಅಥವಾ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಬಿಸಿಪಿ ವಿವರಿಸಿದರು.
ಕೃಷಿ ವಿಚಕ್ಷಣಾ ದಳದ ಮುಂದುವರೆದ ಜಫ್ತಿ: 2021 ಏಪ್ರಿಲ್ 1ರಿಂದ ಸೆ.30ರವರೆಗೆ ಕೃಷಿ ವಿಚಕ್ಷಣಾದಳ 1394 ಕ್ವಿಂಟಾಲ್ ಪ್ರಮಾಣದ ರೂ .415.78 ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಿದ್ದು,8039 ಟನ್ ಪ್ರಮಾಣದ ರೂ .145.32 ಲಕ್ಷ ರೂ. ಮೌಲ್ಯದ ರಸಗೊಬ್ಬರಗಳನ್ನು 5724 ಮತ್ತು 4592 ಕೆ.ಜಿ ಪ್ರಮಾಣದ ರೂ 640 ಲಕ್ಷ ಮೌಲ್ಯದ ಕೀಟನಾಶಕಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 2021-22 ನೇ ಸಾಲಿನಲ್ಲಿ ರೂ 62615 ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ವಿವಿಧ ಜಿಲ್ಲೆಗಳಲ್ಲಿ ಒಪ್ತಿ ಮಾಡಲಾಗಿದೆ.
ಬೆಳೆ ಸಮೀಕ್ಷೆ ವಿವರ: 2021-22ನೇ ಸಾಲಿನಲ್ಲಿ ಸುಮಾರು 25677 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವ ಗುರಿಯಿದ್ದು , ಅಕ್ಟೋಬರ್ 1ರವರೆಗೆ ಒಟ್ಟು 22805 ತಾಕುಗಳಲ್ಲಿ ಶೇ.88.81 ರಷ್ಟು ಪೂರ್ವ ಮುಂಗಾರು ಹಾಗೂ ಮುಂಗಾರು ಹಂಗಾಮುಗಳು ಒಳಗೊಂಡಂತೆ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದೆ.
ಬೆಳೆ ವಿಮೆ: 2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಒಟ್ಟು 1280 ಲಕ್ಷ ರೈತರು ಬೆಳೆ ಎಮಗೆ ನೋಂದಾಯಿಸಿದ್ದು,ಒಟ್ಟು 36 ಬೆಳೆಗಳನ್ನು ಅಧಿಸೂಚಿಸಲಾಗಿದೆ.
ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ: ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ರೈತರ ಮಕ್ಕಳಿಗೆ ಅನುಕೂಲ ಕಲ್ಪಿಸಲು ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆಯಡಿ ಇದುವರೆವಿಗೂ 8931 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ರೂ . 2.44 ಕೋಟಿ ವರ್ಗಾಯಿಸಲಾಗಿದೆ.
ರಾಜ್ಯದಲ್ಲಿ ದಾಖಲೆ ಪ್ರಮಾಣದ 158.73 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ: 2020-21ರ ಸಾಲಿನ ರಾಜ್ಯದಲ್ಲಿ ದಾಖಲೆ ಪ್ರಮಾಣದ 158.73 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆಯಾಗಿದ್ದು, ದೇಶದ ಸರಾಸರಿಗೆ ಹೋಲಿಸಿದಾರೆ ಶೇಕಡಾ 2 ರಷ್ಟು ರಾಜ್ಯದ ಸರಾಸರಿಗೆ ಹೋಲಿಸಿದರೆ ಶೇಕಡಾ 10 ರಷ್ಟು ಹೆಚ್ಚಿನ ಉತ್ಪಾದನೆಯಾಗಿರುತ್ತದೆ.
2021 ಮುಂಗಾರು ಹಂಗಾಮಿನಲ್ಲಿ 77.00 ಲಕ್ಷ ಹೆಕ್ಟರ್ ವಿಸ್ತೀರ್ಣದಲ್ಲಿ ಬಿತ್ತನೆ ಗುರಿ ಇದ್ದು 77.20 ಲಕ್ಷ ಹೆಕ್ಟರ್ ವಿಸ್ತೀರ್ಣದಲ್ಲಿ ಬಿತ್ತನೆ ಮಾಡುವ ಮೂಲಕ ಶೇಕಡಾ 100.26 ರಷ್ಟು ಸಾಧನೆ ಮಾಡಲಾಗಿದೆ.ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಯೂರಿಯಾ ಸೇರಿದಂತೆ ರಾಜ್ಯದಲ್ಲಿ ಒಟ್ಟು 2647000 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, 3541606 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿ 2834226 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಕೃಷಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಕತ್ರಿ, ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್, ಇಲಾಖಾ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….