ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮಗೆ ಯಾವುದೇ ಆಸಕ್ತಿ ಇಲ್ಲ ಮತ್ತು ಕೇವಲ ರಾಜ್ಯ ರಾಜಕಾರಣಕ್ಕೆ ಮಾತ್ರ ತಾವು ಸೀಮಿತವಾಗುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಹಿನ್ನಲೆ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ನೀಡಲಾಗಿದೆ ಎಂಬ ಮಾಧ್ಯಮಗಳ ವರದಿಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾಗಾಂಧಿಯವರ ಜೊತೆಗಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು.
ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ.
ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….