ದೊಡ್ಡಬಳ್ಳಾಪುರ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಜ್ಯ ಹೆದ್ದಾರಿ ಯಲಹಂಕ – ಹಿಂದೂಪುರ ನಡುವಿನ ತಪಸೀಹಳ್ಳಿ ಬಳಿ ಸಂಭವಿಸಿದೆ.
ಭಾನುವಾರ ರಾತ್ರಿ ಘಟನೆ ನಡೆದಿದ್ದು, ಗೌರಿಬಿದನೂರುನಿಂದ ದ್ವಿಚಕ್ರ ವಾಹನದಲ್ಲಿ ದೊಡ್ಡಬಳ್ಳಾಪುರದ ಕಡೆಗೆ ಬರುತ್ತಿದ್ದ ಬಿಹಾರ ಮೂಲದ ದಿನೇಶ್ (35ವರ್ಷ), ಅನಿಲ್ ಪಾಸ್ವಾನ್ (41ವರ್ಷ) ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಕಾರಿನ ಚಾಲಕ ಪರಾರಿಯಾಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……