ಬೆಂ.ಗ್ರಾ.ಜಿಲ್ಲೆ: ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವಎನ್.ನಾಗರಾಜು(ಎಂ.ಟಿ.ಬಿ.) ಅಕ್ಟೋಬರ್ 16 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಬೆಳಿಗ್ಗೆ 11 ಗಂಟೆಗೆ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಮರಳುಕುಂಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11.30 ಗಂಟೆಗೆ ಮರಳುಕುಂಟೆ ಗ್ರಾಮದ ಹರಿಜನ ಕಾಲೋನಿಗೆ ಭೇಟಿ ನೀಡಿ, ಅಹವಾಲು ಸ್ವೀಕರಿಸಲಿದ್ದಾರೆ ಹಾಗೂ ಮಳೆಯಿಂದ ಬಿದ್ದ ಮನೆಯ ಮಾಲೀಕರಿಗೆ ಪರಿಹಾರ ವಿತರಣೆ ಮಾಡಲಿದ್ದಾರೆ.
ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಅಯೋಜಿಸಿರುವ ವಾಲಿಬಾಲ್ ಟೂರ್ನಮೆಂಟ್ ಗೆ ಚಾಲನೆ ನೀಡಲಿದ್ದಾರೆ ಹಾಗೂ 12.45 ಗಂಟೆಗೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1.00 ಗಂಟೆಗೆ ಮರಳುಕುಂಟೆ ಗ್ರಾಮದ ವಿಶೇಷ ವಿಕಲಚೇತನರಿಗೆ ವಿವಿಧ ಸೌಲಭ್ಯಗಳ ಆದೇಶ ಪ್ರತಿ ವಿತರಣೆ ಹಾಗೂ ವಿವಿಧ ಸಲಕರಣೆಗಳನ್ನು ವಿತರಿಸಲಿದ್ದಾರೆ.
ನಂತರ ಮಧ್ಯಾಹ್ನ 3.00 ಗಂಟೆಗೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತದನಂತರ 3.30 ಗಂಟೆಗೆ ಮರಳುಕುಂಟೆ-ನೆಲಮಂಗಲ ರಸ್ತೆ ಮಾರ್ಗವಾಗಿ ಬೆಂಗಳೂರಿನ ಕೇಂದ್ರಸ್ಥಾನಕ್ಕೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….