ಭೂಕಂಪನ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ: ಮನೆ ಮುಂದೆ ಶೆಡ್ ನಿರ್ಮಾಣ ಕುರಿತಂತೆ ಸಿ.ಎಂ.ಅವರೊಂದಿಗೆ ಚರ್ಚಿಸಿ ಕ್ರಮ

Channel Gowda
Hukukudi trust

ಕಲಬುರಗಿ: ಭೂಕಂಪನ ಪೀಡಿತ ಗ್ರಾಮಗಳಲ್ಲಿ ಮನೆ ಮುಂದೆ ಶೆಡ್ ನಿರ್ಮಾಣ ಮಾಡಬೇಕು ಎಂಬ ಗ್ರಾಮಸ್ಥರ ಬೇಡಿಕೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಆರ್.ಅಶೋಕ್ ಹೇಳಿದರು.

hulukudi maharathotsava
Aravind, BLN Swamy, Lingapura

ಮಂಗಳವಾರ ಚಿಂಚೋಳಿ ತಾಲೂಕಿನ ಭೂಕಂಪನ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಭೇಟಿ ನೀಡಿದ ಅವರು ಶಾಲಾ ಆವರಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಗಡಿಕೇಶ್ವರ ಮತ್ತು ಸುತ್ತಮುತ್ತ ಹಳ್ಳಿಗಳಲ್ಲಿ ಭೂಮಿ ಕಂಪಿಸುತ್ತಿರುವ ಕಾರಣ ಗ್ರಾಮದಲ್ಲಿ ಭೂಕಂಪದ ತೀವ್ರತೆ ಅರಿಯಲು ಹೈದ್ರಬಾದಿನ ಎನ್.ಜಿ.ಆರ್.ಐ. ವಿಜ್ಞಾನಿಗಳ ತಂಡ ಸಿಸ್ಮೋಮೀಟರ್ ಯಂತ್ರ ಅಳವಡಿಸಿದ್ದಾರೆ. ಮುಂದಿನ 1 ತಿಂಗಳ ಕಾಲ ವಿಜ್ಞಾನಿಗಳು ಈ ಯಂತ್ರದ ಮೂಲಕ ದಾಖಲಾಗುವ ಪ್ರತಿಯೊಂದು ಮಾಹಿತಿಯನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವೈಜ್ಞಾನಿಕವಾಗಿ ವರದಿ ಸಲ್ಲಿಸಲಿದ್ದು, ತದನಂತರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.

Hulukudi mahajathre
Aravind, BLN Swamy, Lingapura

ಹೈದ್ರಾಬಾದಿನ ಭೂ ವಿಜ್ಞಾನಿಗಳ ತಂಡದ ಪ್ರಾಥಮಿಕ ವರದಿ ಪ್ರಕಾರ ಇದು ಸಣ್ಣ ಪ್ರಮಾಣದ ಭೂಕಂಪವಾಗಿದ್ದು, ಹೆದರುವ ಅವಶ್ಯಕತೆವಿಲ್ಲ. ಕಳೆದ 2-3 ವರ್ಷದಿಂದ ಹೆಚ್ಚಿನ ಮಳೆಯಾಗಿದೆ. ಜೊತೆಗೆ ಸುಣ್ಣದ ಕಲ್ಲಿನಿಂದ ಕೂಡಿರುವ ಪ್ರದೇಶ ಇದಾಗಿದ್ದರಿಂದ ಭೂಮಿಯೊಳಗೆ ರಸಾಯನಿಕ ಕ್ರಿಯೆಗಳ ಚಲನವಲನದಿಂದ ಶಬ್ದ ಇತ್ತೀಚೆಗೆ ಹೆಚ್ಚಾಗಿ ಕೇಳಿಬರುತ್ತಿದೆ ಎಂದಿದ್ದಾರೆ. ಹೀಗಾಗಿ ಸಾರ್ವಜನಿಕರು ಭಯಪಡುವ ಅವಶ್ಯಕತೆವಿಲ್ಲ. ಸರ್ಕಾರ ನಿಮ್ಮೊಂದಿಗಿದೆ ಧೈರ್ಯದಿಂದಿರಿ ಎಂದು ಗ್ರಾಮಸ್ಥರಿಗೆ ಅತ್ಮಸ್ಥೈರ್ಯ ತುಂಬಿದರು.

ಭೂಕಂಪನದಿಂದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಲ್ಲಿ 50 ಸಾವಿರ ರೂ. ಪರಿಹಾರ ನೀಡಲಾಗುವುದು. ಗ್ರಾಮದಲ್ಲಿ ಸರ್ವೆ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಯಾವುದಕ್ಕೂ ಗ್ರಾಮಸ್ಥರು ಎಚ್ಚರಿಕೆಯಿಂದಿರಬೇಕು. ಧೈರ್ಯ ಕಳೆದುಕೊಳ್ಳಬಾರದು. ಸರ್ಕಾರ ನಿಮಗಾಗಿ ಕಾಳಜಿ ಕೇಂದ್ರ ತೆರೆದಿದೆ. ಹಿಂದೆ ಗಂಜಿ ಕೇಂದ್ರ ಎಂದು ಕರೆಯಲಾಗುತ್ತಿತ್ತು. ನಮ್ಮ ಸರ್ಕಾರ ಗೌರವಯುತವಾಗಿ ಕಾಳಜಿ ಕೇಂದ್ರ ಎಂದು ಮರುನಾಮಕರಣಗೊಳಿಸಿ ಕಷ್ಟದ ಕಾಲದಲ್ಲಿ ನಿಮ್ಮ ಕಾಳಜಿ ವಹಿಸುತ್ತಿದ್ದೇವೆ. ಕಿವಿ ಮತ್ತು ಕಣ್ಣಿರುವ ಸರ್ಕಾರ ನಮ್ಮದಾಗಿದೆ ಎಂದರು.

ಕಾಳಜಿ ಕೇಂದಲ್ಲಿ ಗುಣಮಟ್ಟದ ಅಹಾರ ಪೂರೈಕೆಗೆ ಸೂಚಿಸಲಾಗಿದೆ. ಇದಕ್ಕೆಂದೆ ಮೆನು ಸಹ ನೀಡಲಾಗಿದೆ. ಅವಶ್ಯಬಿದ್ದರೆ ಇನ್ನಿತರ ಗ್ರಾಮದಲ್ಲಿಯೂ ಕಾಳಜಿ ಕೇಂದ್ರ ತೆರೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹಣದ ಕೊರತೆಯಿಲ್ಲ. ವಿಪತ್ತು ನಿರ್ವಹಣಾ ಅನುದಾನದಡಿ ಎಲ್ಲವು ಭರಿಸಲಾಗುವುದು ಎಂದು ಸಚಿವ ಅರ್.ಅಶೋಕ ತಿಳಿಸಿದರು.

ಇದಕ್ಕೂ ಮುನ್ನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ ಕಳೆದ 10 ವರ್ಷದಿಂದ ಗ್ರಾಮದಲ್ಲಿ ಭೂಕಂಪನದ ಸದ್ದು ಕೇಳಿಸುತ್ತಿದೆ. ಆದರೆ ಕಳೆದ 10-12 ದಿನದಿಂದ ಶಬ್ದದ ತೀವ್ರತೆ ಹೆಚ್ಚಾದ ಕಾರಣ ಜನ ಭಯಭೀತರಾಗಿದ್ದಾರೆ. 3 ದಿನದ ಹಿಂದೆಯೆ ತಾವು ಮತ್ತು ಸಂಸದ ಡಾ.ಉಮೇಶ ಜಾಧವ ಅವರು ಅಧಿಕಾರಿಗಳೊಂದಿಗೆ ರಾತ್ರಿ ವಾಸ್ತವ್ಯ ಮಾಡಿ ಜನರಲ್ಲಿ ಧೈರ್ಯ ತುಂಬಿದ್ದೇವೆ. ಆಡಳಿತ ಯಂತ್ರ 24 ಗಂಟೆ ಇಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಇಲ್ಲಿನ ಜನರ ಅಪೇಕ್ಷೆಯಂತೆ ಮನೆ ಮುಂದೆ ಶೆಡ್ ನಿರ್ಮಿಸಬೇಕು ಮತ್ತು ಕಚ್ಚಾ ಮನೆಗಳನ್ನು ಸರ್ಕಾರದಿಂದಲೆ ಪಕ್ಕಾ ಮನೆ ನಿರ್ಮಿಸಿಕೊಡಬೇಕು ಎಂದು ಸಚಿವರಲ್ಲಿ ಗ್ರಾಮಸ್ಥರ ಪರವಾಗಿ ರಾಜಕುಮಾರ ಪಾಟೀಲ ಬೇಡಿಕೆ ಇಟ್ಟರು.

ರಾಷ್ಟ್ರೀಯ ಭೂಭೌತ ವಿಜ್ಞಾನ ಸಂಶೋಧನಾ ಸಂಸ್ಥೆಯ ಭೂ ವಿಜ್ಞಾನಿ ಡಾ.ಶಶಿಧರ ಮಾತನಾಡಿ ರಾಜ್ಯ ಸರ್ಕಾರದ ಕೋರಿಕೆಯಂತೆ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿ ಭೂಕಂಪ ಅಳೆಯುವ ಮಾಪಕ ಯಂತ್ರ ಅಳವಡಿಸಿದೆ. ಇದು ಸುತ್ತಮುತ್ತಲಿನ 5 ರಿಂದ 10 ಕಿ.ಮಿ. ವ್ಯಾಪ್ತಿಯಲ್ಲಾಗುವ ಭೂಕಂಪನದ ಮಾಹಿತಿ ಹೈದ್ರಾಬಾದ್ ಎನ್.ಜಿ.ಆರ್.ವೈ ಸಂಸ್ಥೆಗೆ ರವಾನಿಸಲಿದೆ.

ಗಡಿಕೇಶ್ವರ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಆಗುತ್ತಿರುವ ಭೂಕಂಪನಗಳು ತೀರಾ ಸಣ್ಣ ಪ್ರಮಾಣದಾಗಿದ್ದು, ಇದರಿಂದ ಯಾವುದೇ ಹಾನಿಯಾಗುವುದಿಲ್ಲ. ಇಂತಹ ಸಣ್ಣ ಪ್ರಮಾಣದ ಭೂಕಂಪಗಳು ವಿಶ್ವದಾದ್ಯಂತ ಪ್ರತಿನಿತ್ಯ ನಡೆಯುತ್ತವೆ. ಇದಕ್ಕೆ ಗ್ರಾಮಸ್ಥರು ಹೆದರುವ ಅವಶ್ಯತೆಯಿಲ್ಲ ಎಂದು ಅಭಯ ನೀಡಿದರು.

ಸುಣ್ಣದ ಕಲ್ಲಿನ ಪ್ರದೇಶ ಇದಾಗಿದ್ದು, ಇತ್ತೀಚೆಗೆ ಹೆಚ್ಚಿನ ಮಳೆಯೂ ಆಗಿರುವ ಕಾರಣ ಸುಣ್ಣದ ಕಲ್ಲು ಮತ್ತು ನೀರಿನ ಮಿಶ್ರಣದ ಫಲವಾಗಿ ಭೂಮಿಯೊಳಗಿನಿಂದ ಇಂತಹ ಶಬ್ದಗಳು ಬರುವುದು ಸಹಜ. ಇಲ್ಲಿ ಸ್ಥಾಪಿಸಿರುವ ಸಿಸ್ಮೋಮೀಟರ್‍ನಿಂದ ದಾಖಲಾಗುವ ಪ್ರತಿಯೊಂದು ಮಾಹಿತಿ ಕುರಿತು ಮುಂದಿನ 1 ತಿಂಗಳ ಕಾಲ ಅಧ್ಯಯನ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಡಾ.ಶಶಿಧರ ಅವರು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

50 ಸಾವಿರ ರೂ. ಪರಿಹಾರ ವಿತರಣೆ: ಗ್ರಾಮದಲ್ಲಿ ಭೂಕಂಪನದಿಂದ ಮನೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ 4 ಜನ ಫಲಾನುಭವಿಗಳಿಗೆ ತಲಾ 50 ಸಾವಿರ ರೂ. ಪರಿಹಾರ ಚೆಕ್ ಸಚಿವ ಆರ್. ಅಶೋಕ ನೀಡಿದರು. 

ಸಂಸದ ಡಾ.ಉಮೇಶ ಜಾಧವ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ ರಾಜನ್ ಅವರು ಸಹ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಂ.ಎಲ್.ಸಿ. ಬಿ.ಜಿ.ಪಾಟೀಲ, ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ,  ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಎನ್.ಜಿ.ಆರ್.ಐ. ಭೂ ವಿಜ್ಞಾನಿಗಳಾದ ಡಾ.ಸುರೇಶ, ಡಾ. ಕೃಷ್ಣಮೋಹನ, ಕಲಬುರಗಿ ಸಹಾಯಕ ಆಯುಕ್ತೆ ಮೋನಾ ರೂಟ್, ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಮಲ್ಲಿಕಾರ್ಜುನ ಜೇರಟಗಿ, ಕೃμÁ್ಣ ಅಗ್ನಿಹೋತ್ರಿ, ಚಿಂಚೋಳಿ ತಹಶೀಲ್ದಾರ ಅಂಜುಮ್ ತಬಸ್ಸುಮ್, ಕಾಳಗಿ ತಹಶೀಲ್ದಾರ ನಾಗನಾಥ ತರಗೆ, ತಾಲೂಕ ಪಂಚಾಯತ ಇ.ಓ ಅನೀಲ ರಾಠೋಡ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸೇಡಂ ಸಹಾಯಕ ಆಯುಕ್ತೆ ಅಶ್ವಿಜಾ ಬಿ. ಸ್ವಾಗತಿಸಿದರು.

ಸಚಿವರಿಂದ ಗ್ರಾಮದಲ್ಲಿ ಸಂಚಾರ: ನಂತರ ಸಚಿವ  ಅರ್.ಅಶೋಕ ಅವರು ಗಡಿಕೇಶ್ವರ ಗ್ರಾಮದ ವಿವಿಧ ಓಣಿಗಳಿಗೆ ಭೇಟಿ ನೀಡಿ ಭೂಕಂಪನದಿಂದ ಬಿರುಕು ಕಂಡ ಮನೆಗಳನ್ನು ವೀಕ್ಷಿಸಿದಲ್ಲದೆ ಮನೆ ಮಾಲೀಕರು ಮತ್ತು ಗ್ರಾಮಸ್ಥರೊಂದಿಗೆ ಮಾತನಾಡಿ ಅವರ ಕುಂದುಕೊರತೆ ಆಲಿಸಿದರು. ಸ್ಥಳೀಯ ಗ್ರಾಮಸ್ಥರು ಕಾಳಜಿ ಕೇಂದ್ರದಲ್ಲಿ ನೀಡಲಾಗುತ್ತಿರುವ ಊಟದ ಬಗ್ಗೆ ತೃಪ್ತಿ ವ್ಯಕ್ತಪಡಿಸುತ್ತಾ ಮನೆ ಮುಂದೆ ಶೆಡ್ ನಿರ್ಮಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿಕೊಂಡರು. ಶೆಡ್ ನಿರ್ಮಿಸುವುದಾಗಿ ಭರವಸೆ ನೀಡಿದ ಸಚಿವರು ಈ ಕುರಿತಂತೆ ಸರ್ವೇ ಕಾರ್ಯ ಕೈಗೊಳ್ಳುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ನಂತರ ಸಚಿವರು ಭೂಕಂಪನ ಪೀಡಿತ ಕಾಳಗಿ ತಾಲೂಕಿನ ಹೊಸಳ್ಳಿ (ಹೆಚ್) ಮತ್ತು ಕೊರವಿ (ರಾಮನಗರ ತಾಂಡಾ)ಕ್ಕೂ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆ ಆಲಿಸಿದರು. ಲೊಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾದ ತಾತ್ಕಾಲಿಕ ಶೆಡ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಆರ್ ಅಶೋಕ್ ಬಿಜೆಪಿ ಬಣ ಬಡಿದಾಟದ ಕುರಿತು ಸುದ್ದಿಗಾರರು ಪ್ರಶ್ನಿಸಿದರೆ, ಅವರಿಗೂ ಅದಕ್ಕೂ ಸಂಬಂಧ ಇಲ್ಲವೆಂಬಂತೆ ನುಣಿಚಿಕೊಂಡರು. R Ashoka

[ccc_my_favorite_select_button post_id="102287"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!