ಬೆಂ.ಗ್ರಾ.ಜಿಲ್ಲೆ: “ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ” ಅಂಗವಾಗಿ ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
“ಮಹರ್ಷಿ ವಾಲ್ಮೀಕಿ” ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪುಷ್ಪನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….