ದೊಡ್ಡಬಳ್ಳಾಪುರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಸಮಾಜದ ಏಳಿಗೆಗೆ ರಾಮಾಯಣ ದಾರಿದೀಪವೆಂದ ಗಣ್ಯರು

Channel Gowda
Hukukudi trust

ದೊಡ್ಡಬಳ್ಳಾಪುರ: ರಾಮಾಯಣದಲ್ಲಿ ಬಿಂಬಿತವಾಗಿರುವ ಹಲವಾರು ಅಂಶಗಳು ಸಮಾಜದ ಏಳಿಗೆಗೆ ಪೂರಕವಾಗಿ ದಾರಿ ದೀಪವಾಗಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

hulukudi maharathotsava
Aravind, BLN Swamy, Lingapura

ಪರಿಶಿಷ್ಟ ವರ್ಗಗಳ ಇಲಾಖೆ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ರಾಮಾಯಣ ರಚಿಸಿದ ವಾಲ್ಮೀಕಿಯವರ ಜೀವನ ಕುರಿತು ಅನೇಕ ರೀತಿಯ ಉಲ್ಲೇಖಗಳಿವೆ, ಆದರೆ ಅದರ ವಾಸ್ತವಿಕತೆಯನ್ನು ಅರಿಯಲು ಪ್ರಯತ್ನಿಸಬೇಕು ಎಂದರು. ರಾಮಾಯಣ  ಮಹಾಕಾವ್ಯ ಪ್ರೀತಿ, ತ್ಯಾಗ, ಸಹನೆ, ಪ್ರಕೃತಿ ಸೌಂದರ್ಯ, ವಿರಹ ಹೀಗೆ ಹಲವಾರು ಅಂಶಗಳನ್ನು ಒಳಗೊಂಡಿದೆ.

Hulukudi mahajathre
Aravind, BLN Swamy, Lingapura

ವಾಲ್ಮೀಕಿಯವರು ನಾರದರ ಮಾತಿಗೆ ಪ್ರೇರೇಪಿತರಾಗಿ ಸಾಂಸಾರಿಕ ಸಾಂಗತ್ಯವನು ತೊರೆದು, ತದೇಕಚಿತ್ತದಿಂದ ರಾಮ ಧ್ಯಾನವನ್ನು ಮಾಡಿ ಜ್ಞಾನವನ್ನು ಪಡೆದು ಇಂದಿಗೂ ಚಿರಸ್ಮರಣೀಯವಾಗಿರುವ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಅದೇ ರೀತಿ ಪ್ರತಿಯೊಬ್ಬರೂ ಸಹ ಸನ್ಮಾರ್ಗದಲ್ಲಿ ನಡೆದು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂದು ಶಾಸಕರು ಹೇಳಿದರು.

ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಅತ್ಯದ್ಭುತ ಕಾವ್ಯವಾಗಿದ್ದು, ಈ ಕಾವ್ಯ ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿದೆ. ಮೂಲ ರಾಮಾಯಣದಿಂದ ಹಲವು ರಾಮಾಯಣಗಳು ರಚಿತವಾಗಿ ಪ್ರಶಸ್ತಿಗಳನ್ನು ಪಡೆದಿವೆ. ಜೀವನದ ಮೌಲ್ಯ, ಬದುಕಿನ ಸಿದ್ದಾಂತವನ್ನು ಈ ಮಹಾನ್ ಗ್ರಂಥದ ಮೂಲಕ ವಾಲ್ಮೀಕಿ ತಿಳಿಸಿಕೊಟ್ಟಿದ್ದಾರೆ ಎಂದರು.

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ವಾಲ್ಮೀಕಿ ಜಯಂತಿ ಕೇವಲ ರಜೆಗೆ ಮಾತ್ರ ಸೀಮಿತವಾಗಬಾರದು. ಮಹರ್ಷಿ ವಾಲ್ಮೀಕಿ ಜೀವನ ಸಾರವನ್ನು ಇಂದಿನ ಯುವ ಜನಾಂಗಕ್ಕೆ ತಿಳಿಸಬೇಕಿದೆ. ರಾಮಾಯಣದಲ್ಲಿ ದುಷ್ಟರು ಮತ್ತು ಶ್ರೇಷ್ಠರ ಕುರಿತು ಉಲ್ಲೇಖಿಸಿದ್ದಾರೆ. ಕಾರಣ ದುಷ್ಟರಿಗೆ ಶಿಕ್ಷಿ, ಶ್ರೇಷ್ಟರಿಗೆ ರಕ್ಷೆ ಎಂಬುದು ಇದರ ಸಾರವಾಗಿದೆ‌. ಆದರೆ ಈ ಕಾವ್ಯವನ್ನು ವಯಸ್ಸಾದ ನಂತರ ಅಧ್ಯಯ‌ನಕ್ಕೆ ಮುಂದಾಗುತ್ತಿರುವುದು ವಿಪರ್ಯಾಸ. ರಾಮಯಣ ಮಹಾ ಕಾವ್ಯದ ನೀತಿ ಸಾರವನ್ನು ಚಿಕ್ಕವಯಸ್ಸಿನಲ್ಲೇ ಮಕ್ಕಳಿಗೆ ತಿಳಿಸಬೇಕಿದೆ ಅದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಬ್ಬಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ರಸಾದ್, ಸಹಾಯಕ ನಿರ್ದೆಶಕ ಸೋಮಶೇಖರ್, ಬಿಇಒ ಶುಭಮಂಗಳ, ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಪ್ರೇಮ್ ಕುಮಾರ್, ಉಪಾಧ್ಯಕ್ಷ ಕುಮಾರ್, ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು, ವಿವಿಧ ಸಂಘಟನೆಯ ಮುಖಂಡರು ಹಾಜರಿದ್ದರು.

ಇದೇ ವೇಳೆ ವಾಲ್ಮೀಕಿ ಸಮುದಾಯದ 20 ಮಂದಿಗೆ ಹಕ್ಕು ಪತ್ರಗಳನ್ನು ವಿತರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಆರ್ ಅಶೋಕ್ ಬಿಜೆಪಿ ಬಣ ಬಡಿದಾಟದ ಕುರಿತು ಸುದ್ದಿಗಾರರು ಪ್ರಶ್ನಿಸಿದರೆ, ಅವರಿಗೂ ಅದಕ್ಕೂ ಸಂಬಂಧ ಇಲ್ಲವೆಂಬಂತೆ ನುಣಿಚಿಕೊಂಡರು. R Ashoka

[ccc_my_favorite_select_button post_id="102287"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!