ದೊಡ್ಡಬಳ್ಳಾಪುರ: ರಾಜ್ಯದ ವಿವಿಧ ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 20 ಮಂದಿ ಡಿವೈಎಸ್ಪಿ (ಸಿವಿಲ್) ಗಳನ್ನು ವರ್ಗಾಯಿಸಿ ಮಹಾನಿರ್ದೇಶಕರು ಮತ್ತು ಆರಕ್ಷಕ ನಿರೀಕ್ಷಕರ ಪರವಾಗಿ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ.
ಈ ಆದೇಶದನ್ವಯ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಟಿ.ರಂಗಪ್ಪ ಅವರನ್ನು ಸಂಪಿಗೇಹಳ್ಳಿಗೆ ವರ್ಗಾಯಿಸಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಗರಾಜ್.ಕೆ.ಎಸ್. ಅವರನ್ನು ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ.
ಸರಳ ವ್ಯಕ್ತಿತ್ವದ ಟಿ.ರಂಗಪ್ಪ: ಕಳೆದ ಎರಡು ವರ್ಷಗಳಿಂದ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿರುವ ಟಿ.ರಂಗಪ್ಪ ಅವರು ಸರಳ ವ್ಯಕ್ತಿತ್ವದವರಾಗಿ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಕೋವಿಡ್ ಮೊದಲ ಅಲೆ ಹಾಗೂ ಎರಡನೇ ಅಲೆಯಲ್ಲಿ ಕೋವಿಡ್ ವಾರಿಯರ್ ಆಗಿ ಅವರು ಶ್ರಮಿಸಿದ ರೀತಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣವಾಗಿತ್ತು.
ಬಹುಮುಖ್ಯ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ, ಇತರೆ ಸಿಬ್ಬಂದಿಗಳೊಂದಿಗೆ ಒಡನಾಟದಲ್ಲಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ತರುವಲ್ಲಿ ಟಿ.ರಂಗಪ್ಪ ಅವರ ಪಾತ್ರ ಅಪಾರವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……