ದೊಡ್ಡಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲೆ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಇಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಬೇಡಿಕೆಗಳ ಈಡೇರಿಕೆಗಾಗಿ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಚಳುವಳಿ ಮಾದರಿಯಲ್ಲಿ ಪ್ರತಿಭಟನೆ ಮಾಡಲು ರಾಜ್ಯ ಕಾರ್ಯಕಾರಿ ಸಭೆಯ ನಿರ್ಣಯದಂತೆ ಈ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಶಿಕ್ಷಕರ ಪ್ರಮುಖ ಬೇಡಿಕೆಗಳಾದ ಸಿ ಅಂಡ್ ಆರ್ ನಿಯಮ ತಿದ್ದುಪಡಿ, ವರ್ಗಾವಣೆ, ಮುಖ್ಯ ಶಿಕ್ಷಕರ ಸಮಸ್ಯೆ, ಸೇವಾ ನಿರತ ಪ್ರಾಥಮಿಕ ಶಾಲಾ ಪದವೀಧರರ 6 ರಿಂದ 8ನೇ ತರಗತಿ ವಿಲೀನಗೊಳಿಸಲು ಹಾಗೂ NPS ತೆಗೆಯುವುದು ಮತ್ತು ಗ್ರಾಮೀಣ ಪ್ರದೇಶದ ಶಿಕ್ಷಕರ ಸಮಸ್ಯೆ ಬಗೆಹರಿಸುವುದು ಹಾಗೂ ಇನ್ನಿತರ ಸಮಸ್ಯೆಗಳ ಈಡೇರಿಕೆಗಾಗಿ ಈಗಾಗಲೇ ತರಬೇತಿ ಬಹಿಷ್ಕಾರ ಮಾಡಿದ್ದು, ಇದನ್ನು ಮುಂದುವರೆಸಿ ಹೋರಾಟದ ಮುಂದುವರೆದ ಭಾಗವಾಗಿ ಶಿಕ್ಷಕರು ಶಾಲಾ ಕರ್ತವ್ಯದ ಅವಧಿಯಲ್ಲಿ ಮಕ್ಕಳ ಜೊತೆಗಿದ್ದು ಕಪ್ಪು ಪಟ್ಟಿಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮನವಿ ಪತ್ರ ಸಲ್ಲಿಕೆ: ಮತ್ತೊಂದೆಡೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೈ ಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಈ ವೇಳೆ ಕಾರ್ಯದರ್ಶಿ ವಸಂತ ಗೌಡ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಎಸ್.ರಾಜಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿಗಳಾದ ಅಮ್ಜದ್ ಖಾನ್, ಚಂದ್ರಕಲಾ, ಗೌರವ ಅಧ್ಯಕ್ಷ ಎಸ್.ಮಂಜುನಾಥ್, ಜಿಲ್ಲಾ ಖಂಜಾಚಿ ಕೆ.ಎಚ್.ಬಸವಲಿಂಗಯ್ಯ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್‌ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……