![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ರಾಮನಾಮ ಜಪಿಸುತ್ತಾ ಮತ ಪಡೆದು ಅಧಿಕಾರ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಒಂದೆಡೆಯಾದರೆ, ಮಹಾಕಾವ್ಯ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿಯ ಜನ್ಮದಿನಾಚರಣೆಯನ್ನು ಆಚರಿಸದೆ ತಾಲೂಕಿನ ಬಿಜೆಪಿ ಮುಖಂಡರು ಕಡೆಗಣಿಸಿದ್ದಾರೆಂದು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕು ನಿರ್ದೇಶಕ ಗೋವಿಂದರಾಜ್ ಆರೋಪಿಸಿದ್ದಾರೆ.
ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಕಾಂಗ್ರೆಸ್, ಜೆಡಿಎಸ್ ಕಚೇರಿ, ವಿವಿಧ ಸರ್ಕಾರಿ ಕಚೇರಿ ಸೇರಿದಂತೆ ಹಲವೆಡೆಗಳಲ್ಲಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸರಳವಾಗಿಯಾದರು ಸಂಭ್ರಮದಿಂದ ಆಚರಿಸಿದ್ದಾರೆ.
ಆದರೆ ಶ್ರೀರಾಮರ ಹೆಸರಲ್ಲಿ ಮತ ಪಡೆದು ಅಧಿಕಾರಕ್ಕೆ ಬರುವ ಬಿಜೆಪಿ ಮುಖಂಡರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸದೆ ಕಡೆಗಣಿಸಿದ್ದಾರೆ. ಇದು ಮಹರ್ಷಿ ವಾಲ್ಮೀಕಿ ಮೇಲಿನ ಅಸಡ್ಡೆಯನ್ನು ತೋರುತ್ತಿದೆ.
ಈ ನಿಲುವನ್ನು ಬಿಜೆಪಿ ಮುಖಂಡರು ಬಿಡಬೇಕಿದೆ ಇಲ್ಲವಾದಲ್ಲಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇಂದು ಆಚರಣೆ: ಇನ್ನು ಈ ಕುರಿತು ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎನ್.ನಾಗರಾಜು ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿದ್ದು, ನಗರಸಭೆ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನದ ಒತ್ತಡದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಇಂದು ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್‌ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……