ದೊಡ್ಡಬಳ್ಳಾಪುರ: ನಗರದ ನಿವಾಸಿ ಗಣೇಶ್ ಗೌಡ.ಬಿ.ಎನ್ (17 ವರ್ಷ) ಯುವಕ ಕಾಣೆಯಾಗಿದ್ದಾರೆಂದು ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ನಿವಾಸಿಯಾದ ನಾರಾಯಣಗೌಡರ ಮಗನಾದ ಗಣೇಶ್ ಗೌಡ.ಬಿ.ಎನ್ ಶನಿವಾರ ಬೆಳಗ್ಗೆ ಕಾಲೇಜಿಗೆ ತೆರಳುವುದಾಗಿ ಮನೆಯಿಂದ ತೆರಳಿದ್ದಾನೆ. ಆದರೆ ಯುವಕ ಕಾಲೇಜಿಗೆ ಬಾರದ ಹಿನ್ನೆಲೆಯಲ್ಲಿ ಕಾಲೇಜಿನ ಸಿಬ್ಬಂದಿಗಳು ಪೋಷಕರಿಗೆ ಕರೆ ಮಾಡಿ ತಿಳಿಸಿದ್ದು, ಸಂಜೆಯವರೆಗೂ ಕಾದ ಪೋಷಕರು ಆತಂಕಗೊಂಡು ನಗರ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.
ಯುವಕ ಮನೆಯಿಂದ ಹೊರಡುವಾಗ ಕಪ್ಪು ಬಣ್ಣದ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ನೀಲಿ ಬಣ್ಣದ ಕಾಲೇಜು ಬ್ಯಾಂಗ್ ತೊಟ್ಟಿದ್ದಾನೆ.
ಈತನ ಕುರಿತು ಮಾಹಿತಿ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ 9901661778 ಸಂಖ್ಯೆಗೆ ಮಾಹಿತಿ ನೀಡುವಂತೆ ಪೋಷಕರು ಮನವಿ ಮಾಡಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ………