Site icon ಹರಿತಲೇಖನಿ

ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಶೋಭಾ ಕರಂದ್ಲಾಜೆ

Channel Gowda
Hukukudi trust

ಕೋಲಾರ: ಕೇಂದ್ರ  ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ. ಗ್ರಾಮ ಪಂಚಾಯತಿ, ಗ್ರಾಮ ಸಭೆ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. 

Aravind, BLN Swamy, Lingapura

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜ, ಕೀಟನಾಶಕಗಳು ಹಾಗೂ ರಸಗೊಬ್ಬರಗಳನ್ನು ಮಾರಾಟ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ  ಸೂಚಿಸಿದರು.

ಜಿಲ್ಲೆಯಲ್ಲಿ ಎಣ್ಣೆ ಕಾಳುಗಳ ಉತ್ಪಾದನೆ ಹೆಚ್ಚು ಮಾಡಿ. ಪಾರಂಪರಿಕ ಸಾವಯವ ಪದ್ಧತಿಯಲ್ಲಿ ಬೆಳೆಗಳನ್ನು ಬೆಳೆಯಲು ಹೆಚ್ಚಿನ ಒತ್ತು ನೀಡಿ. ಸಾವಯವದ ಮೂಲಕ ಬೆಳೆದ ಬೆಳಗಳಿಗೆ ವಿಶ್ವ ಮಟ್ಟದಲ್ಲಿ ಹೆಚ್ಚಿನ ಬೇಡಿಕೆಯಿದೆ. ಬೇವಿನಸೊಪ್ಪಿನ ಬೆಳೆಯ ಬಗ್ಗೆ ರೈತರಿಗೆ ಅರಿವು ಮೂಡಿಸಿ ಎಂದು ಅವರು ತಿಳಿಸಿದರು.

Aravind, BLN Swamy, Lingapura

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರೂಪದೇವಿ ಅವರು ಜಿಲ್ಲೆಯಲ್ಲಿ ಬಿತ್ತನೆ ಪ್ರದೇಶ 2,09 566 ಹೆಕ್ಟರ್ ಪ್ರದೇಶ, ಕೃಷಿ ಬೆಳೆಗಳ ವಿಸ್ತಿರ್ಣ 97,900 ಹೆಕ್ಟೆರ್, ತೋಟಗಾರಿಕೆ ಬೆಳೆಗಳ ವಿಸ್ತೀರ್ಣ 1 ಲಕ್ಷ ಹೆಕ್ಟೆರ್  ಹಾಗೂ ರೇμÉ್ಮ ಬೆಳೆ ವಿಸ್ತಿರ್ಣ 19,329 ಹೆಕ್ಟೆರ್ ಪ್ರದೇಶವಿದೆ. ಜಿಲ್ಲೆಯಲ್ಲಿ ಒಟ್ಟು 8,19,509 ಜಾನುವಾರುಗಳಿವೆ. ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈಖUIಖಿS ಯೋಜನೆಯಲ್ಲಿ ಜಿಲ್ಲೆಯ 1,94,343 ರೈತರು ನೊಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈಖUIಖಿS ನಲ್ಲಿ ಶೇಕಡಾ 100 ರಷ್ಟು ರೈತರನ್ನು ನೋಂದಾಯಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಕೋಲಾರ ಲೋಕ ಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಕೃಷಿ ಯಂತ್ರೋಪಕರಣಗಳ ಸಹಾಯಧನ ಯೋಜನೆಯಲ್ಲಿ ಹೆಚ್ಚಿನ ಫಲಾನುಭವಿಗಳಿಗೆ ನೀಡಿ. ಹೋಬಳಿಯ ಮಟ್ಟದಲ್ಲಿ ಕೋಲ್ಡ್‍ಸ್ಟೋರೇಜ್ ಗಳನ್ನು ಸ್ಥಾಪಿಸಬೇಕು. ದೇಶದಲ್ಲಿ ಯಾವ ರಾಜ್ಯದಲ್ಲಿ ಯಾವ ರೀತಿಯ ಬೆಳೆÉಯನ್ನು ಬೆಳೆಯುತ್ತಿದ್ದಾರೆ ಯಾವ ಬೆಳೆಗೆ ಬೇಡಿಕೆ ಹೆಚ್ಚಿದೆ ಎಂಬುವುದರ ಮಾಹಿತಿಯನ್ನು ರೈತರಿಗೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಅವರು ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ನೀರಿನಿಂದ ತುಂಬಾ ಕೆರೆಗಳು ತುಂಬಿವೆ. ಜಿಲ್ಲೆಯಲ್ಲಿ ಇದುವರೆಗೂ 200 ಎಕರೆ ಬೆಳೆ ಹೆಚ್ಚಿನ ಮಳೆಯಿಂದ ನಾಶವಾಗಿದೆ. ಎ.ಪಿ.ಎಂ.ಸಿ. ಮಾರುಕಟ್ಟೆಗೆ ಜಾಗವನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ………

Exit mobile version