ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿ ಸಮೀಪದಲ್ಲಿನ ಗೌರಿಬಿದನೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಮೃತನನ್ನು ಅಸ್ಸಾಂ ಮೂಲದ ರಫೀಕ್ (22 ವರ್ಷ) ಎಂದು ಗುರುತಿಸಲಾಗಿದ್ದು, ಈತ ಫಾರಂ ಕೋಳಿ ಸಗಟು ಮಾರಾಟ ಅಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಗೌರಿಬಿದನೂರಿನ ಅಂಗಡಿಯಲ್ಲಿ ಕೆಲಸ ಮುಗಿಸಿ ಆರೂಢಿಗೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ವ್ಯಾಪ್ತಿಯಲ್ಲಿ ಸಿಮೆಂಟ್ ಲಾರಿಗಳ ಮಿತಿಮೀರಿದ ವೇಗದಿಂದಾಗಿ ಪದೇ ಪದೇ ಅಪಘಾತ ಸಂಭವಿಸಿ, ವಾಹನ ಸವಾರರು ಸಾವನಪ್ಪುತ್ತಿದ್ದರು, ಪೊಲೀಸರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ………