Site icon ಹರಿತಲೇಖನಿ

ಕೋವಿಡ್ ಲಸಿಕಾಕರಣ: ಬೆಂ.ಗ್ರಾ.ಜಿಲ್ಲೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಲು ಸೂಚನೆ ನೀಡಿದ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾರಣವನ್ನು ಶೇ.100 ರಷ್ಟು ಪ್ರಗತಿ ಸಾಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಪಿ. ಹೇಮಲತಾ ಸೂಚನೆ ನೀಡಿದರು.

Aravind, BLN Swamy, Lingapura

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಲಸಿಕಾ ತಂಡವು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಪ್ರತಿ ಮನೆ ಮನೆಗೂ ಭೇಟಿ ನೀಡಿ, ಕೋವಿಡ್ ಲಸಿಕೆ ಹಾಕಿಸುವುದರ ಮೂಲಕ ಲಸಿಕಾರಣವನ್ನು ಯಶಸ್ವಿಗೊಳ್ಳಿಸುವಂತೆ ಸೂಚಿಸಿದರು.

Aravind, BLN Swamy, Lingapura

ಕೋವಿಡ್-19 ರಿಂದ ಮೃತಪಟ್ಟಿರುವ ಬಿ.ಪಿ.ಎಲ್ ಕುಟುಂಬದ ಒಬ್ಬ ಸದಸ್ಯರಿಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರಧನ ನೀಡಲಾಗುತ್ತಿದ್ದು, ತ್ವರಿತಗತಿಯಲ್ಲಿ ಪರಿಹಾರಧನವನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳಿಗೆ ಪರಿಹಾರಧನ ಒದಗಿಸುವಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರಲ್ಲದೆ, ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಲ್ಲಿ ಶೇ. 0.39% ಕೋವಿಡ್ ಪಾಸಿಟಿವಿಟಿ ದರ ದಾಖಲಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಎರಡನೇ ಹಂತದ ಲಸಿಕಾಕರಣವನ್ನು ಶೇ.54 ರಷ್ಟು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನಲೆ, ಶಿಥಿಲಗೊಂಡಿರುವ ಮನೆಗಳನ್ನು ಖಾಲಿ ಮಾಡಿಸಿ, ಅಂಗನವಾಡಿ ಕೇಂದ್ರಗಳಿಗೆ ರವಾನಿಸಿ ಹಾಗೂ ಮನೆಗಳನ್ನು ನಿರ್ಮಿಸಿ ಕೊಡುವ ಯೋಜನೆ ಕುರಿತಂತೆ ಪರಿಶೀಲಿಸಿ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಉಪ ವಿಭಾಗಧಿಕಾರಿ ಅರುಳ್ ಕುಮಾರ್, ವೈದ್ಯಾಧಿಕಾರಿಗಳಾದ ಡಾ.ಶ್ರೀನಿವಾಸ್, ಡಾ.ಶಕೀಲಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

Exit mobile version