ದೊಡ್ಡಬಳ್ಳಾಪುರ: ಜೆಡಿಎಸ್ ಪಕ್ಷದಲ್ಲಿ ಹೆಸರಿನಲ್ಲಿ ಮಾತ್ರ ಜ್ಯಾತ್ಯಾತೀತತೆ ಇದೆ. ಆದರೆ ವಾವಸ್ತದಲ್ಲಿ ಜ್ಯಾತ್ಯಾತೀತತೆ ಉಳಿದಿಲ್ಲ ಎನ್ನುವುದು ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಸಾಬೀತಾಗಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಅವರು ಮಂಗಳವಾರ ನಡೆದ ನಗರಸಭೆ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರ ಕುರಿತು ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ, ಆರ್.ಎಸ್.ಎಸ್ ವಿರುದ್ಧ ಮಾತನಾಡುವ ಕುಮಾರಸ್ವಾಮಿ ಅವರು ಇಲ್ಲಿ ಮಾತ್ರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಜೆಡಿಎಸ್ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಬಹುತೇಕ ಸದಸ್ಯರು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಒಲವು ಹೊಂದಿದ್ದರು. ಈ ಬಗ್ಗೆ ಮಾತುಕತೆಯನ್ನು ಸಹ ನಡೆಸಿದ್ದರು. ಆದರೆ ಕುಮಾರಸ್ವಾಮಿ ಅವರ ಸೂಚನೆಯಿಂದ ಅನಿವಾರ್ಯವಾಗಿ ಬಿಜೆಪಿ ಜೊತೆಗೆ ಕೈಜೋಡಿದ್ದಾರೆ ಎಂದರು.
ಜೆಡಿಎಸ್ ವರಿಷ್ಟರೊಂದಿಗೆ ನಾನು ಮೈತ್ರಿ ಕುರಿತಂತೆ ಯಾವುದೇ ರೀತಿಯ ಮಾತುಕತೆಯನ್ನು ನಡೆಸಿರಲಿಲ್ಲ. ಆದರೆ ಸ್ಥಳೀಯ ಮುಖಂಡರು, ಜೆಡಿಎಸ್ ಜಿಲ್ಲಾ ಅಧ್ಯಕ್ಷರು ಮೈತ್ರಿ ಕುರಿತು ಹಲವು ಸುತ್ತಿನ ಮಾತುಕತೆ ನಡೆಸಿದ್ದರು ಎಂದರು.
ನಗರದ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಹಣವನ್ನು ಸಹ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಿಂದಕ್ಕೆ ಪಡೆಯಿತು. ಈಗ ಮಾತ್ರ ಅಭಿವೃದ್ಧಿ ವಿಚಾರವಾಗಿ ಮಾತನಾಡುತ್ತಾರೆ. ನಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಮ್ಮದು ಸದಾ ಸಹಕಾರ ಇರಲಿದೆ ಎಂದರು. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…